ಮಂಗಳವಾರ, ಜೂನ್ 15, 2021
21 °C

ಮತದಾರರ ಪಟ್ಟಿ ಪರಿಷ್ಕರಣೆ: ವಿಶೇಷ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್‌): ಮತ­ದಾರರ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿ­ಸಲು, ಇರಬಹುದಾದ ದೋಷ­ಗ­ಳನ್ನು ಸರಿಪಡಿಸಿ­ಕೊಳ್ಳಲು ಮತ್ತು ಹೊಸದಾಗಿ ಹೆಸರು ನೋಂದಾಯಿಸಿಕೊಳ್ಳಲು ಮತದಾರರಿಗೆ ಅನುವು ಮಾಡಿಕೊಡುವ ಉದ್ದೇಶದಿಂದ   ಚುನಾವಣಾ ಆಯೋಗವು ದೇಶದಾದ್ಯಂತ ಮಾರ್ಚ್‌ 9ರಂದು (ಭಾನುವಾರ) ವಿಶೇಷ ಶಿಬಿರ ಏರ್ಪಡಿಸಿದೆ.ಗುರುತಿನ ಚೀಟಿ ಇದ್ದರೂ, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲ ಎಂಬ ಕಾರಣಕ್ಕೆ ಮತದಾನ ಮಾಡಲು ಅವಕಾಶ ನೀಡಲಿಲ್ಲ ಎಂಬ ದೂರುಗಳು ಈ ಹಿಂದೆ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಆಯೋಗವು ಈ ಶಿಬಿರವನ್ನು ಆಯೋಜಿಸಿದೆ.ದೇಶದ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಶಿಬಿರ ನಡೆಯಲಿದೆ. ಮತಗಟ್ಟೆ ಅಧಿಕಾರಿಯ ಬಳಿಯಲ್ಲಿರುವ ಪಟ್ಟಿ­ಯಲ್ಲಿ ತಮ್ಮ ಹೆಸರುಗಳಿವೆಯೇ ಎಂಬು­ದನ್ನು ಜನರು ಪರಿಶೀಲಿಸಬಹು­ದಾಗಿದೆ. ಒಂದು ವೇಳೆ ಹೆಸರು ಇಲ್ಲದೇ ಹೋದರೆ, ಹೊಸದಾಗಿ ಅರ್ಜಿ ಸಲ್ಲಿಸಲೂ ಅವಕಾಶವಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.