ಮಂಗಳವಾರ, ಮಾರ್ಚ್ 2, 2021
29 °C
ರಾಜಧಾನಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ಪೈಪೋಟಿ

ಮತದಾರರ ಭೇಟಿ, ಮುಖಂಡರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮತದಾರರ ಭೇಟಿ, ಮುಖಂಡರ ಸಭೆ

ಬೆಂಗಳೂರು: ರಾಜಧಾನಿಯ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳು ಸೋಮ­ವಾರವೂ ಹುರುಪಿನಿಂದ ಪ್ರಚಾರ ನಡೆಸಿದರು. ಚಾಮರಾಜ­ಪೇಟೆ, ಗಾಂಧಿನಗರ, ಶಿವಾಜಿನಗರ, ಕೆ.ಆರ್‌.ಪುರ ಮತ್ತಿತರ ವಿಧಾನಸಭಾ ಕ್ಷೇತ್ರ­ಗಳ ವ್ಯಾಪ್ತಿಯಲ್ಲಿ ಮತ ಯಾಚಿಸಿದರು.ಉತ್ತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿ.ನಾರಾಯಣಸ್ವಾಮಿ ಅವರು ಬೆಳಿಗ್ಗೆ ವಿಧಾನ ಪರಿಷತ್‌ ಸದಸ್ಯ ಎಂ.ವಿ.ರಾಜ­ಶೇಖರನ್‌ ಮತ್ತು ವಿಧಾನ ಪರಿಷತ್‌ನ ಮಾಜಿ ಸಚಿವ ಪ್ರೊ.ಮುಮ್ತಾಜ್‌ ಅಲಿ­ಖಾನ್‌ ಅವರ ಮನೆಗಳಿಗೆ ಭೇಟಿ ನೀಡಿದರು. ಅಲ್ಲಿಯೇ ಮುಖಂಡರನ್ನು ಭೇಟಿ ಮಾಡಿದರು.ಸಂಜೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರು ಮತ್ತು ಮುಖಂಡರ ಸಭೆಯಲ್ಲಿ ಭಾಗವಹಿಸಿ­ದರು. ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ, ಶಾಸಕ ಎಸ್‌.ಟಿ.ಸೋಮ­ಶೇಖರ್‌, ವಿಧಾನ ಪರಿಷತ್‌ ಸದಸ್ಯ ಎಂ.ಆರ್‌.­ಸೀತಾರಾಂ, ಮಾಜಿ ಶಾಸಕ­ರಾದ ನೆ.ಲ ನರೇಂದ್ರಬಾಬು, ಬಿ.ಪ್ರಸನ್ನ­ಕುಮಾರ್‌, ಕೆಪಿಸಿಸಿ ಉಪಾಧ್ಯಕ್ಷ ಡಾ.ಬಿ.­ಎಲ್‌.­ಶಂಕರ್‌, ಪ್ರಧಾನ ಕಾರ್ಯದರ್ಶಿ ಎನ್‌.ಎಸ್‌.ಭೋಸರಾಜು ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.ಉದ್ಯಮಿಗಳೊಂದಿಗೆ ಸಂವಾದ: ಬೆಂಗ­ಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್‌ ಅವರು ಗೋವಿಂದರಾಜನಗರ ವಿಧಾನ­ಸಭಾ ಕ್ಷೇತ್ರದ ವ್ಯಾಪ್ತಿಯ ಹಂಪಿನಗರ ಹಾಗೂ ಸುತ್ತಮುತ್ತಲ ಪ್ರದೇಶ ಮತ್ತು ವಿಜಯ­ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ­ಯಲ್ಲಿ ಪ್ರಚಾರ ನಡೆಸಿದರು. ನಂತರ ವಿಜಯನಗರದ ಸಣ್ಣ ಕೈಗಾರಿಕೆ­ಗಳ ಸಂಘದಲ್ಲಿ (ಕಾಸಿಯಾ) ಸಣ್ಣ ಕೈಗಾರಿ­ಕೋದ್ಯಮಿಗಳ ಜೊತೆ ಸಂವಾದ ನಡೆಸಿದರು.ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.­ಮೋಹನ್‌ ಅವರು ಬೆಳಿಗ್ಗೆ ಚಾಮರಾಜ­ಪೇಟೆ ವಿಧಾನಸಭಾ ಕ್ಷೇತ್ರದ ಗೋರಿ­ಪಾಳ್ಯ, ಬಿನ್ನಿಪೇಟೆ ಮತ್ತಿತರ ಕಡೆಗಳಲ್ಲಿ ಮತದಾರರನ್ನು ಭೇಟಿ ಮಾಡಿದರು. ಬಳಿಕ ಲೋಕಸಭಾ ಕ್ಷೇತ್ರದ ಬಿಜೆಪಿ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು. ಸಂಜೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಬೆಂಬಲ ಯಾಚಿಸಿದರು.ಇದೇ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಬೆಳಿಗ್ಗೆ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸುಭಾಷ್‌ ನಗರದಲ್ಲಿ ಹೋಳಿ ಆಚರಣೆಯಲ್ಲಿ ಪಾಲ್ಗೊಂಡರು. ನಂತರ ಕಾಂಗ್ರೆಸ್‌ನ ಹಲವು ಮುಖಂಡರನ್ನು ಭೇಟಿ ಮಾಡಿ ಚುನಾವಣಾ ಪ್ರಚಾರದ ಕುರಿತು ಚರ್ಚಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.