ಭಾನುವಾರ, ಜನವರಿ 26, 2020
22 °C

ಮತದಾರರ ಮಾಹಿತಿ ನೀಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೂನ್‌ನಲ್ಲಿ ಚುನಾವಣೆ ನಡೆಯಲಿರುವ ವಿಧಾನ ಪರಿಷತ್‌ನ ಆರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಮಾಹಿತಿಯನ್ನು ಆಗಾಗ್ಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಬಿಜೆಪಿ ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ.ಶಾಸಕ ಎಸ್.ರಘು, ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ಮತ್ತು ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಸುಬ್ಬನರಸಿಂಹ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ಶುಕ್ರವಾರ ಮುಖ್ಯ ಚುನಾವಣಾಧಿಕಾರಿ ಸಿ.ಎಸ್.ಸುರಂಜನ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮತದಾರರ ಪಟ್ಟಿಗೆ ಹೊಸ ಹೆಸರುಗಳನ್ನು ಸೇರಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ವಾರಕ್ಕೊಮ್ಮೆ ಅಥವಾ ಹದಿನೈದು ದಿನಗಳಿಗೆ ಒಮ್ಮೆ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಅವರು ಮನವಿ ಮಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಮಾಹಿತಿಯನ್ನು ನಿರಂತರವಾಗಿ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದರಿಂದ ರಾಜಕೀಯ ಪಕ್ಷಗಳು ಮತದಾರರನ್ನು ಭೇಟಿ ಮಾಡಲು ಅನುಕೂಲವಾಗುತ್ತದೆ. ಅಲ್ಲದೇ ಹೊಸದಾಗಿ ಅರ್ಜಿ ಸಲ್ಲಿಸಿರುವವರಿಗೆ ತಮ್ಮ ಹೆಸರು ಪಟ್ಟಿಯಲ್ಲಿ ಸೇರಿದೆಯೇ, ಇಲ್ಲವೇ ಎಂಬುದು ತಿಳಿಯುತ್ತದೆ. ಈ ಎಲ್ಲ ಅಂಶಗಳನ್ನು ಗಮನಿಸಿ ತಮ್ಮ ಮನವಿಗೆ ಸ್ಪಂದಿಸಬೇಕು ಎಂದು ಬಿಜೆಪಿ ಮುಖಂಡರು ಕೋರಿದರು.

ಪ್ರತಿಕ್ರಿಯಿಸಿ (+)