ಗೌರಿಬಿದನೂರು: ತಾಲ್ಲೂಕಿನಲ್ಲಿ ನಾಲ್ಕು ಬಾರಿ ಶಾಸಕನಾಗಬೇಕಾದರೆ ಮತದಾರರು ಕಾರಣ. ಎಲ್ಲಿವರೆಗೂ ಮತದಾರರು ತಮ್ಮ ಮೇಲೆ ವಿಶ್ವಾಸ ಇಟ್ಟಿರುತ್ತಾರೋ ಅಲ್ಲಿವರೆಗೂ ಶಾಸಕನಾಗಿರಲು ಸಾಧ್ಯ ಎಂದು ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಅಭಿಪ್ರಾಯಪಟ್ಟರು.

ಪಟ್ಟಣದ ಎಇಎಸ್ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ತಾಲ್ಲೂಕು ನಾಯಕ ಸಂಘ ಭಾನುವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮತದಾರರು ಪ್ರಜ್ಞಾವಂತರು ಎಂದರು.

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾದನಹಳ್ಳಿ ಕೆರೆಯಲ್ಲಿ ₨2 ಕೋಟಿ ವೆಚ್ಚದಲ್ಲಿ ವಸತಿ ನಿಲಯದ ಕಟ್ಟಡ ನಿರ್ಮಾಣವಾಗುತ್ತಿದೆ. ವಾಟದ ಹೊಸಹಳ್ಳಿ ಬಳಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ 10 ಎಕರೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಮಾದನಹಳ್ಳಿ ಕೆರೆಯಲ್ಲಿ ₨ 50 ಲಕ್ಷ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದು, ಮುಂದಿನ ವಾಲ್ಮೀಕಿ ಜಯಂತಿಯನ್ನು ನೂತನ ಕಟ್ಟಡದಲ್ಲಿ ಆಚರಿಸಬೇಕು ಎಂದರು.

ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಎನ್.ಬಾಬಣ್ಣ ಮಾತನಾಡಿ, ಜನಸಂಖ್ಯೆ ಆಧಾರದ ಮೇಲೆ ಕನಿಷ್ಟ ಶೇ 7ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಪುರಸಭೆ ಮಾಜಿ ಅಧ್ಯಕ್ಷ ಆರ್.ಅಶೋಕ್ ಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ನಾಗರಾಜಪ್ಪ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ವೇಣುಗೋಪಾಲ್, ನಿವೃತ್ತ ಕಾರ್ಯ ನಿರ್ವಾಹಣಾಧಿಕಾರಿ ರಾಜಾರಾಂ, ಪ್ರಾಧ್ಯಾಪಕ ಡಾ.ಎಂ.ಹನುಮಂತಪ್ಪ, ನಿವೃತ್ತ ಉಪ ವಿಭಾಗಾಧಿಕಾರಿ ಭಕ್ತರಾಮೇಗೌಡ, ಎಇಎಸ್ ನ್ಯಾಷನಲ್ ಕಾಲೇಜಿನ ಉಪ ಪ್ರಾಂಶುಪಾಲ ಎಂ.ವಿ.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಜೆ.ಚಂದ್ರಮೋಹನ್, ಯುವ ಸಾಹಿತಿ ಮ.ನ.ಕೃಷ್ಣಮೂರ್ತಿ, ಸಂಘದ ಉಪಾಧ್ಯಕ್ಷ ಕರೇತಿಮ್ಮಯ್ಯ, ಕಾರ್ಯದರ್ಶಿ ಆನಂದ್, ಬೈಚಾಪುರ ಗಂಗಾಧರ, ವೆಂಕಟೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.