ಗುರುವಾರ , ಮೇ 13, 2021
39 °C

ಮತೀಯ ಹಿಂಸೆ ತಡೆ ಕಾಯ್ದೆ ವಿರುದ್ಧ ಹೋರಾಟಕ್ಕೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: `ವಿದೇಶಿ ಮಹಿಳೆ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿ (ನ್ಯಾಕ್) ಸಮಿತಿ ರಚಿಸಿರುವ `ಮತೀಯ ಹಿಂಸಾಚಾರ ತಡೆ ಕಾಯ್ದೆ-2011~ರ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಡಬೇಕು~ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ವಿಕ್ಟೋರಿಯಾ ಗೌರಿ ಕರೆ ನೀಡಿದರು.ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

`ಭಾರತದ ಸಂಸ್ಕೃತಿಯ ಗಂಧ-ಗಾಳಿ ಇಲ್ಲದ, ಇಟಲಿಯ ಸೋನಿಯಾ ಗಾಂಧಿ ನೇತೃತ್ವದ ಸಮಿತಿ ಕೋಮು ಗಲಭೆ ತಡೆಗಟ್ಟಲು `ಮತೀಯ ಹಿಂಸಾಚಾರ ತಡೆ ಕಾಯ್ದೆ~ ರಚಿಸಿದೆ.ಇದನ್ನು ದೇಶದ ಆರು ರಾಜ್ಯದ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ. ಈ ಕಾಯ್ದೆಯೇನಾದರೂ ಜಾರಿಗೆ ಬಂದಲ್ಲಿ ಇಡೀ ದೇಶವೇ ಇಬ್ಭಾಗವಾಗುವ ಸಾಧ್ಯತೆ ಇದೆ~ ಎಂದು ಅವರು ಪ್ರತಿಪಾದಿಸಿದರು. ಸಚಿವ ಎಸ್.ಎ. ರವೀಂದ್ರನಾಥ್ ಉದ್ಘಾಟಿಸಿದರು. ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷೆ ಪೂರ್ಣಿಮಾ ಪ್ರಕಾಶ್, ಸದಸ್ಯೆ    ಮಧುಶ್ರೀ, ರಾಜ್ಯ ಘಟಕದ ಅಧ್ಯಕ್ಷೆ ರೀನಾ ಪ್ರಕಾಶ್ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.