ನವದೆಹಲಿ (ಪಿಟಿಐ): ಭಾರತೀಯ ಗುಪ್ತಚರ ಅಧಿಕಾರಿಗಳು ಸೌದಿ ಅರೇಬಿಯಾದಲ್ಲಿನ ತಮ್ಮ ನಿವಾಸದಿಂದ ಬಂಧಿಸಿರುವ ಪತಿಯ ಬಗ್ಗೆ ಮಾಹಿತಿ ನೀಡುವಂತೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿರುವ ಅರ್ಜಿಗೆ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮತ್ತಷ್ಟು ಕಾಲಾವಕಾಶ ನೀಡಿದೆ.

ತಮ್ಮ ಪತಿ ಫಸಿಹ್ ವೆುಹಮೂದ್ ಅವರ ಬಗ್ಗೆ ಮಾಹಿತಿ ನೀಡುವಂತೆ ಕೋರಿ ನಿಖತ್ ಪರ್ವೀನ್ ಅರ್ಜಿ ಸಲ್ಲಿಸಿದ್ದರು.

`ಇದೊಂದು ಗಂಭೀರವಾದ ಪ್ರಕರಣವಾಗಿದ್ದು, ಅರ್ಜಿದಾರರ ಪತಿ ಎಲ್ಲಿದ್ದಾರೆ ಎಂದು ನಾವು ತಿಳಿಯಬಯಸುತ್ತೇವೆ~ ಎಂದು ಹೇಳಿದ ನ್ಯಾಯಮೂರ್ತಿಗಳಾದ ಕೆ.ಎಸ್.ರಾಧಾಕೃಷ್ಣನ್ ಮತ್ತು ಜೆ.ಎಸ್.ಕೇಹರ್ ಅವರನ್ನೊಳಗೊಂಡ ಪೀಠ, ಅರ್ಜಿಯ ಮುಂದಿನ ವಿಚಾರಣೆ ನಡೆಯಲಿರುವ ಜೂನ್ 6ರೊಳಗಾಗಿ ಉತ್ತರಿಸುವಂತೆ ಗೃಹ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿದೆ.

ದೆಹಲಿಯ ಜಾಮಿಯಾ ಮಸೀದಿ ಮತ್ತು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಸ್ಫೋಟಗಳಲ್ಲಿ ಫಸಿಹ್ ಕೈವಾಡ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಲ್ಲದೆ, ಫಸಿಹ್ ವಿರುದ್ಧ ಇಂಟರ್ಪೋಲ್ ಇತ್ತೀಚೆಗೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.