ಮಂಗಳವಾರ, ಏಪ್ರಿಲ್ 20, 2021
26 °C

ಮತ್ತೆ ಅಡ್ವಾಣಿ ಹೆಗಲೇರಿದ ಬಾಬ್ರಿ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್.ಕೆ. ಅಡ್ವಾಣಿ ಮತ್ತು ಇತರ 20 ಜನರ ವಿರುದ್ಧದ ಪಿತೂರಿ ನಡೆಸಿದ್ದ ಕ್ರಿಮಿನಲ್ ಆರೋಪಗಳನ್ನು ಪುನರ್ ಪರಿಶೀಲಿಸುವಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ  ಸಂಬಂಧಿಸಿದಂತೆ ತಮ್ಮ ನಿಲುವುಗಳನ್ನು ತಿಳಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ, ಬಾಳ ಠಾಕ್ರೆ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸಿರಪುರಕರ್  ಮತ್ತು ಟಿ.ಎಸ್. ಠಾಕೂರ್ ಅವರೊನ್ನಳಗೊಂಡ ಪೀಠ ನಾಲ್ಕು ವಾರದೊಳಗೆ ನೋಟಿಸ್ ಗೆ ಉತ್ತರ ನೀಡುವಂತೆ ಸೂಚಿಸಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್.ಕೆ. ಅಡ್ವಾಣಿ ಮತ್ತು ಇತರ 20 ಜನರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪಗಳನ್ನು ಪುನರ್ ಪರಿಶೀಲಿಸುವಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಮೇ 20 2010ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.

.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.