ಮಂಗಳವಾರ, ಮಾರ್ಚ್ 2, 2021
29 °C
ಅಡ್ವಾಣಿ ಹೇಳಿಕೆಗೆ ಜೇಟ್ಲಿ ಪ್ರತಿಕ್ರಿಯೆ

ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಜೇಟ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಜೇಟ್ಲಿ

ಸ್ಯಾನ್‌ಫ್ರಾನ್ಸಿಸ್ಕೊ (ಪಿಟಿಐ): ‘ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಬರಲು ಸಾಧ್ಯವೇ ಇಲ್ಲ’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

‘ಸಂವಿಧಾನ ಮತ್ತು ಕಾನೂನಿನ ರಕ್ಷಣೆಯನ್ನು ಬದಿಗೊತ್ತಿ ಪ್ರಜಾಪ್ರಭುತ್ವ  ತುಳಿದು ಹಾಕುವ ಶಕ್ತಿಗಳು ಈಗ ಹೆಚ್ಚು ಬಲಿಷ್ಠವಾಗಿವೆ’ ಎಂದು ಬಿಜೆಪಿಯ ಹಿರಿಯ ಮುಖಂಡ ಎಲ್‌.ಕೆ ಅಡ್ವಾಣಿ ಅವರು ಇತ್ತೀಚೆಗೆ ಇಂಡಿಯನ್‌ ಎಕ್ಸ್‌ಪ್ರೆಸ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಜೇಟ್ಲಿ, ಭಾರತದಂತಹ ಪ್ರಜಾಪ್ರಭುತ್ವ ದೇಶದಲ್ಲಿ ಸರ್ವಾಧಿಕಾರಿ ವ್ಯವಸ್ಥೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.ಸಂವಿಧಾನದ ಅನುಕೂಲಗಳನ್ನು ಬಳಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸರ್ವಾಧಿಕಾರಿ ವ್ಯವಸ್ಥೆಗೆ ಬದಲಿಸಬಹುದು. ಆದರೆ, ಇದರಿಂದ ಆಡಳಿತ ವ್ಯವಸ್ಥೆ, ಪೊಲೀಸ್‌, ಮಾಧ್ಯಮ, ನ್ಯಾಯಾಂಗ ವ್ಯವಸ್ಥೆ  ನೆಲಕ್ಕಚ್ಚುತ್ತವೆ ಎಂದು  ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳು ಅಡ್ವಾಣಿ ಅವರ ಹೇಳಿಕೆಯನ್ನು ಅನುಮೋದಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಲು ಬಳಸಿಕೊಂಡಿವೆ. ಸಂಸತ್‌ ಮತ್ತು ಇತರ ಸಂಸ್ಥೆಗಳನ್ನು ಮೋದಿ ನೇತೃತ್ವದ ಸರ್ಕಾರ ಶಿಥಿಲಗೊಳಿಸುತ್ತಿದೆ ಎಂದೂ ಆರೋಪಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.