ಭಾನುವಾರ, ಮೇ 22, 2022
29 °C

ಮತ್ತೊಂದು ಮಿನಿ ಮಹಾ ಸಮರಕ್ಕೆ ಮುಹೂರ್ತ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್ಎಸ್): ಬಹು ನಿರೀಕ್ಷಿತ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಘೋಷಿಸಿದ್ದು, ರಾಜಕೀಯ ಪಕ್ಷಗಳ ಕಸರತ್ತು ಗರಿಗೆದರತೊಡಗಿದೆ.

ಏಪ್ರಿಲ್ 4 ರಿಂದ ಆರಂಭವಾಗುವ ಮತದಾನ ಮೇ 10 ಕ್ಕೆ ಅಂತ್ಯವಾಗಲಿದ್ದು, 13 ರಂದು ಮತ ಎಣಿಕೆ ನಡೆಯಲಿದೆತಮಿಳುನಾಡು, ಕೇರಳ, ಪಾಂಡಿಚೇರಿ, ಅಸ್ಸಾಂ ಹಾಗೂ ಪಶ್ಚಿಮಬಂಗಾಳದಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಚುನಾವಣೆಗಳು ನಡೆಯಲಿವೆ. ತಮಿಳುನಾಡು, ಕೇರಳ ಹಾಗೂ ಪಾಂಡಿಚೇರಿಗಳಲ್ಲಿ ಏಪ್ರಿಲ್ 13ರಂದು ಒಂದೇ ಹಂತದ ಚುನಾವಣೆ ನಡೆಯಲಿದ್ದರೆ, ಅಸ್ಸಾಂನಲ್ಲಿ ಏಪ್ರಿಲ್ 4 ಹಾಗೂ 11 ರಂದು 2 ಹಂತದ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೇಷಿ ಪ್ರಕಟಿಸಿದರು.

ಆದರೆ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 18, 23, 27 ಹಾಗೂ ಮೇ 3, 7, 10 ರಂದು ಒಟ್ಟು 6 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಮತಎಣಿಕೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.