ಬುಧವಾರ, ಜೂನ್ 23, 2021
30 °C

ಮತ ಚಲಾಯಿಸಿ ಪ್ರಜಾಪ್ರಭುತ್ವದ ಮೌಲ್ಯ ಕಾಪಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳಲ್ಕೆರೆ: ಸಂವಿಧಾನ 18 ವರ್ಷ ತುಂಬಿದ ಎಲ್ಲರಿಗೂ ಮತ ಚಲಾಯಿಸುವ ಹಕ್ಕು ನೀಡಿದ್ದು, ಪ್ರತಿಯೊಬ್ಬ ಮತದಾರನೂ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ವಿಮಲಾ ಆರ್‌.ನಂದಗಾಂವ್ ಕರೆ ನೀಡಿದರು.ಪಟ್ಟಣದಲ್ಲಿ ಈಚೆಗೆ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿವಿಧ ಸ್ತ್ರೀ ಶಕ್ತಿ ಸಂಘಗಳು ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮತದಾನ ಮಾಡುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ. ಸೂಕ್ತ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಮತದಾನ ಅವಶ್ಯಕವಾಗಿದ್ದು, ಎಲ್ಲರೂ ತಪ್ಪದೇ ಮತ ಹಾಕಬೇಕು. ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಮತದಾನದ ಬಗ್ಗೆ ಅಸಡ್ಡೆ ತೋರಿದರೆ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದಂತೆ ಎಂದರು.ರೋಟರಿ ಕ್ಲಬ್‌ ಅಧ್ಯಕ್ಷೆ ಗಂಗಮ್ಮ ವೀರಭದ್ರಪ್ಪ ಮಾತನಾಡಿ, ಪ್ರಜ್ಞಾವಂತರೇ ಮತದಾನದ ಬಗ್ಗೆ ತಾತ್ಸಾರ ತೋರಿಸುತ್ತಿರುವ ಬೆಳವಣಿಗೆ. ಸರಿಯಲ್ಲ ಎಂದರು.ವಕೀಲರ ಸಂಘದ ಅಧ್ಯಕ್ಷ ಜಿ.ಮುನೇಶ್ವರಪ್ಪ, ಸಿಡಿಪಿಒ ತಿಪ್ಪಯ್ಯ, ಸರ್ಕಾರಿ ಅಭಿಯೋಜಕ ಮಂಜುನಾಥ, ಡಿ.ಜಯಣ್ಣ, ವಕೀಲರ ಸಂಘದ ಉಪಾಧ್ಯಕ್ಷ ರಂಗಸ್ವಾಮಿ, ವೇದಮೂರ್ತಿ, ಅರುಣ ಕುಮಾರ್‌, ಎಸಿಡಿಪಿ ಜಯಣ್ಣ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.