ಮಂಗಳವಾರ, ನವೆಂಬರ್ 12, 2019
20 °C

ಮತ ಚಲಾಯಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ

Published:
Updated:

ಚನ್ನಗಿರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ತುಂಬಾ ಅಗತ್ಯವಾಗಿದೆ. ಕಾಲಕಾಲಕ್ಕೆ ಬರುವ ವಿವಿಧ ಚುನಾವಣೆಗಳಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾರರು ಮತದಾನ ಮಾಡುವಂತೆ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕು ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕ ಪ್ರೊ.ಚಿದಾನಂದ್ ಹೇಳಿದರು.ಪಟ್ಟಣದ ಲಕ್ಷ್ಮೀ ಚಿತ್ರಮಂದಿರದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಬುಧವಾರ ನಡೆದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮತದಾರರ ಜಾಗೃತಿ ಆಂದೋಲನಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. ಮತದಾರರ ಗುರುತಿನ ಚೀಟಿ ಇದ್ದ ಮಾತ್ರಕ್ಕೆ ಮತ ಚಲಾವಣೆ ಮಾಡಲು ಸಾಧ್ಯವಿಲ್ಲ. ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

ಗ್ರಾಮೀಣ ಪ್ರದೇಶದಲ್ಲಿ ಅನಕ್ಷರಸ್ಥರು ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಅವರನ್ನು ಮತದಾನದಲ್ಲಿ ಪಾಲ್ಗೊಳ್ಳುವಂತೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸಬೇಕು ಎಂದರು.ತಹಶೀಲ್ದಾರ್ ಎಚ್.ಎಂ. ರೇವಣಸಿದ್ದಪ್ಪ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಣಾಧಿಕಾರಿ ಎಸ್.ಟಿ. ಬಸವರಾಜ, ಸಿಡಿಪಿಒ ಎ.ಜಿ. ಶಿವಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಟ್ಯಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಡಿ.ಆರ್. ಮಂಜುನಾಥ್, ಸಂಪನ್ಮೂಲ ವ್ಯಕ್ತಿ ಹಾಲಸಿದ್ದಪ್ಪ, ಚುನಾವಣಾ ಇಲಾಖೆ ಮುಖ್ಯಸ್ಥ ಶಿವಶಂಕರ್ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)