ಬುಧವಾರ, ಮೇ 25, 2022
23 °C

`ಮತ ವಿಭಜನೆ ತಪ್ಪಿಸಲು ಬಿಎಸ್‌ವೈ ವಾಪಸ್'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: `ಲೋಕಸಭಾ ಚುನಾವಣೆಯಲ್ಲಿ ಮತಗಳ ವಿಭಜನೆ ಆಗುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆತರಲು ಕೆಲವರು ಪ್ರಯತ್ನಿಸುತ್ತಿದ್ದಾರೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು.`ಬಿಎಸ್‌ವೈ ಪಕ್ಷಕ್ಕೆ ಕರೆತರುವ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧ' ಎಂದು ಹೇಳಿದ ಜೋಶಿ, `ಈಗಾಗಲೇ ಪಕ್ಷದ ರಾಷ್ಟ್ರೀಯ ಘಟಕದ ನಿಲುವನ್ನು ರಾಜ್ಯದ ಉಸ್ತುವಾರಿ ತಾವರ್‌ಚಂದ್ ಗೆಹ್ಲೋಟ್ ಹೇಳಿದ್ದಾರೆ. ಅದರಂತೆ ಪಕ್ಷಕ್ಕೆ ಸೇರುವುದಾಗಿ ಯಡಿಯೂರಪ್ಪ ಮೊದಲು ಪ್ರಸ್ತಾವನೆ ಸಲ್ಲಿಸಲಿ' ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

`ಲೋಕಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವಂತೆ ಹೈಕಮಾಂಡ್‌ಗೆ ತಾವರ್‌ಚಂದ್ ವರದಿ ನೀಡಿದ್ದಾರೆ ಎಂಬ ವಿಚಾರ ಕೇವಲ ಮಾಧ್ಯಮಗಳ ಸೃಷ್ಟಿ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.