ಮಂಗಳವಾರ, ಜೂನ್ 22, 2021
22 °C

ಮದಕರಿ ನಾಯಕ ಪುತ್ಥಳಿಗೆ ಅವಮಾನ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸದುರ್ಗ: ಕೊಪ್ಪಳ ಜಿಲ್ಲೆ ಜಿರಾಳ ಗ್ರಾಮದ ಮದಕರಿನಾಯಕನ ಪುತ್ಥಳಿಗೆ ಕೆಲವು ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ್ದು, ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ನಾಯಕ ಸಮಾಜ ಪಟ್ಟಣದ ತಾಲ್ಲೂಕು ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ತಾಲ್ಲೂಕಿನ ಜಾನಕಲ್ಲು ಗ್ರಾಮದಲ್ಲಿ ಜನಿಸಿ ಚಿತ್ರದುರ್ಗ ಕೋಟೆಯನ್ನು ಆಳಿ ದೇಶದಲ್ಲಿಯೇ ಖ್ಯಾತಿ ಪಡೆದ ಮದಕರಿ ನಾಯಕನ ಪುತ್ಥಳಿಗೆ ಅವಮಾನ ಮಾಡಿರುವುದು ಖಂಡನೀಯ. ಇಂತಹ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯ ಮತ್ತೊಮ್ಮೆ ಮರುಕಳಿಸದಂತೆ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.ಮದಕರಿನಾಯಕ ಅವರಿಗೆ ಅವಮಾನ ಮಾಡಿರುವುದು ಇಡೀ ಕನ್ನಡ ನಾಡಿಗೆ ಅವಮಾನ ಮಾಡಿದಂತೆ. ತಪ್ಪಿತಸ್ಥರನ್ನು ಬಂಧಿಸುವಲ್ಲಿ ವಿಳಂಬವಾದರೆ ಸಮಾಜದ ಎಲ್ಲಾ ವರ್ಗದವರೂ  ಸೇರಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿರಸ್ತೇದಾರರಿಗೆ ಮನವಿ ನೀಡಿದರು.

ನಾಯಕ ಸಮಾಜದ ಅಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿ ಗಾದ್ರಪ್ಪ, ಮುಖಂಡ ಪೂಜಾರ್‌ ಪ್ರಕಾಶ್‌, ಕೆಂಚಪ್ಪ ಸೇರಿದಂತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.