ಗುರುವಾರ , ಜನವರಿ 23, 2020
21 °C

ಮದನಿಯನ್ನು ಭೇಟಿ ಮಾಡಿದ ಕುಟುಂಬ ಸದಸ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ 2008ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪಿಡಿಪಿ ನಾಯಕ ಅಬ್ದುಲ್ ನಾಸರ್ ಮದನಿಯನ್ನು ಆತನ ಕುಟುಂಬ ಸದಸ್ಯರು ಮಂಗಳವಾರ ಮಧ್ಯಾಹ್ನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.`ಮದನಿಯ ಪತ್ನಿ ಸೂಫಿಯಾ, ಮಗಳು ಸೇರಿದಂತೆ ಒಟ್ಟು ಐದು ಮಂದಿ ಆತನನ್ನು ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಭೇಟಿ ಮಾಡಿದ್ದರು. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಕಾರಾಗೃಹಕ್ಕೆ ಬಂದಿದ್ದ ಕುಟುಂಬ ಸದಸ್ಯರು 30 ನಿಮಿಷಗಳ ಕಾಲ ಮದನಿ ಜತೆ ಮಾತುಕತೆ ನಡೆಸಿದರು~ ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು  `ಪ್ರಜಾವಾಣಿ~ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)