ಮಂಗಳವಾರ, ಮೇ 18, 2021
31 °C

ಮದುವೆ ಜಗಳ: ಯುವತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮದುವೆಗೆ ಸಂಬಂಧಪಟ್ಟಂತೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾದುದರಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾನಗರದ ಎರಡನೇ ಅಡ್ಡರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.ಕಚೇರಿಯೊಂದರಲ್ಲಿ ಸ್ವಾಗತಕಾರಿಣಿ (ರಿಸೆಪ್ಷನಿಸ್ಟ್)ಯಾಗಿದ್ದ ನೇತ್ರಾವತಿ (27) ಆತ್ಮಹತ್ಯೆ ಮಾಡಿಕೊಂಡವರು. ಮದುವೆಗೆ ಸಂಬಂಧಿಸಿದಂತೆ ತಂದೆಯೊಂದಿಗೆ ಜಗಳ ಮಾಡಿಕೊಂಡಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ತಂದೆಗೆ ಬರೆದ ಪತ್ರದಲ್ಲಿ, `ನನ್ನಿಂದಾಗಿ ನೀವು ಸಾಯುವುದು ಬೇಡ. ನಾನೇ ಸಾಯುತ್ತೇನೆ~ ಎಂದು ದಾಖಲಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.