ಮದ್ದೂರು ಬಳಿ ಶಿಂಷಾ ನದಿಗೆ ಬಿದ್ದ ಸರ್ಕಾರಿ ಬಸ್

ಮಂಡ್ಯ: ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಸರ್ಕಾರಿ ಬಸ್ವೊಂದು ಮದ್ದೂರು ತಾಲೂಕಿನ ಶಿವಪುರ ಬಳಿ ಶಿಂಷಾ ನದಿಗೆ ಮಗುಚಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಘಟನೆಯಲ್ಲಿ ಮೃತ ಪಟ್ಟವರ ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ. ಆದರೆ ಅವಘಡದಲ್ಲಿ ಗಾಯಗೊಂಡ 20ಕ್ಕೂ ಅಧಿಕ ಜನರನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಬಸ್ನಲ್ಲಿ ಸಿಲುಕಿರುವ ಜನರನ್ನು ಮೇಲಕ್ಕೆ ಎತ್ತುವ ಕಾರ್ಯ ನಡೆಯುತ್ತಿದೆ.
ಘಟನೆಯಿಂದಾಗಿ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತವಾಗಿದೆ. ಹೆಚ್ಚಿನ ವರದಿ ನಿರೀಕ್ಷಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.