ಭಾನುವಾರ, ಮೇ 9, 2021
27 °C

ಮದ್ಯದ ಅಂಗಡಿ ಪರವಾನಗಿ ರದ್ದತಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಜ್ಯ ಸರ್ಕಾರವು ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆ ರದ್ದುಪಡಿಸಬೇಕು ಎಂದು ಎಐಡಿವೈಒ, ಎಐಎಂಎಸ್‌ಎಸ್ ಸಂಘಟನೆಗಳ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶುಕ್ರವಾರ ನಗರದ ಭಗತ್‌ಸಿಂಗ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಸಿದರು.ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಪ್ರತಿಭಟನಾಕಾರರನ್ನುದ್ದೇಶಿಸಿ ಎಐಎಂಎಸ್‌ಎಸ್ ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷೆ ಚೇತನಾ ಬನಾರೆ ಮಾತನಾಡಿ, ರಾಜ್ಯ ಸರ್ಕಾರ ಹಲವಾರು ಭರವಸೆಗಳನ್ನು ನೀಡುತ್ತಿದೆ. ಇನ್ನೊಂದೆಡೆ ಮದ್ಯದ ಹೊಸ ಅಂಗಡಿಗಳಿಗೆ ಪರವಾನಗಿ ನೀಡುವ ಮೂಲಕ ವಿದ್ಯಾರ್ಥಿ ಹಾಗೂ ಯುವಜನರನ್ನು ದಾರಿ ತಪ್ಪಿಸಲು ಹೊರಟಿದೆ. ಇದರಿಂದ ಹೆಣ್ಣು ಮಕ್ಕಳ ಮೇಲೆ ಮತ್ತಷ್ಟು ಅಪರಾಧಗಳು ನಡೆಯುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು.ಎಐಡಿವೈಒ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚನ್ನಬಸವ ಜಾನೇಕಲ್ ಮಾತನಾಡಿ, ಯುವಜನತೆ ಉದ್ಯೋಗ ಇಲ್ಲದೇ ಸಂಕಷ್ಟದಲ್ಲಿದ್ದಾರೆ. ಯುವಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳುವುದು ಬಿಟ್ಟು ಮದ್ಯ ಮಾರಾಟದ ಹೊಸ ಅಂಗಡಿಗಳಿಗೆ  ಪರವಾನಗಿ ನೀಡಲು ಹೊರಟಿರುವುದು ಖಂಡನೀಯ. ಸರ್ಕಾರ ಕೂಡಲೇ ಮದ್ಯ ಮಾರಾಟದ ಹೊಸ ಅಂಗಡಿಗಳಿಗೆ ನೀಡುವ ಪರವಾನಗಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.ಸಂಘಟನೆಗಳ ಪದಾಧಿಕಾರಿಗಳಾದ ಮಂಜುಳಾ, ಸರೋಜಾ,ಶಾರದಾ, ಹನುಮಂತ, ಸೋಹೆಲ್, ಕಾರ್ತಿಕ್ ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.