ಬೆಂಗಳೂರು: ` ವರ್ಷದಿಂದ ವರ್ಷಕ್ಕೆ ಮದ್ಯಪಾನ ವ್ಯಸನಿಗಳ ಸಂಖ್ಯೆಯಲ್ಲಿ ಶೇ 15 ರಿಂದ 25ರಷ್ಟು ಏರಿಕೆಯಾಗುತ್ತಿದ್ದು, ರಾಜ್ಯದಲ್ಲಿರುವ 12 ಸಾವಿರಕ್ಕಿಂತ ಹೆಚ್ಚು ಮಠಾಧೀಶರು ಮದ್ಯಪಾನ ಮುಕ್ತ ರಾಜ್ಯ ಮಾಡುವತ್ತ ಚಿಂತನೆ ನಡೆಸಬೇಕು~ ಎಂದು ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕರೆ ನೀಡಿದರು.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ಮದ್ಯಪಾನದ ವಿರುದ್ಧ ಧರ್ಮಾಧಿಕಾರಿಗಳ ದುಂಡು ಮೇಜಿನ ಪರಿಷತ್ತಿನಲ್ಲಿ ಅವರು ಮಾತನಾಡಿದರು.

`ಮದ್ಯಪಾನ ವ್ಯಸನದ ಪ್ರವೃತ್ತಿಯು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಯುವ ಪೀಳಿಗೆಯು ಹೊಸ ವರ್ಷಾಚರಣೆ ಸಂಭ್ರಮವನ್ನು ಮದ್ಯಕ್ಕೆ ಮೀಸಲಿಟ್ಟಿದ್ದು, ಸಂಸ್ಕತಿಯನ್ನು ಉಳಿಸುವ ಸಾಮಾಜಿಕ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಹೊರಬೇಕಿದೆ~ ಎಂದು ಹೇಳಿದರು.

`ಸರ್ಕಾರವು ಹೆಚ್ಚುತ್ತಿರುವ ಮದ್ಯದ ಅಂಗಡಿಗಳ ಪರವಾನಗಿ ರದ್ದು ಮಾಡಬೇಕು ಮತ್ತು ಜನ ಜಾಗೃತಿ ಮೂಡಿಸುವ ಮೂಲಕ ಮದ್ಯಪಾನದ ವಿರುದ್ದ ಅಭಿಯಾನ ಆಯೋಜಿಸಬೇಕು~ ಎಂದು ಒತ್ತಾಯಿಸಿದರು.
ಆದಿಚುಂಚನಗಿರಿ ಮಹಾಸಂಸ್ಥಾನದ ಬಾಲಗಂಗಾಥರನಾಥ ಸ್ವಾಮೀಜಿ, `ಪ್ರೌಢಶಾಲಾ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಗತ್ಯವಿರುವ ಪಠ್ಯ ಪುಸ್ತಕ ಸಮರ್ಪಕವಾಗಿ ದೊರೆಯುತ್ತಿಲ್ಲ. ಆದರೆ ಚಟಕ್ಕೆ ಬಿದ್ದ ಅನೇಕ ವಿದ್ಯಾರ್ಥಿಗಳಿಗೆ ಮದ್ಯವು ಸಕಾಲಕ್ಕೆ ಪೂರೈಕೆಯಾಗುತ್ತಿರುವುದು ಆತಂಕಕಾರಿ~ ಎಂದರು.

ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಹೊ.ಶ್ರೀನಿವಾಸಯ್ಯ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ, ಹಂಗಾರಕಟ್ಟೆಯ ನರಸಿಂಹಾಶ್ರಮ ಸ್ವಾಮೀಜಿ, ಹಾವೇರಿಯ ಬಸವ ಶಾಂತಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.