ಮದ್ಯ ಮಾರಾಟ ನಿಲ್ಲಿಸಲು ಆಗ್ರಹ

ಬುಧವಾರ, ಮೇ 22, 2019
°C

ಮದ್ಯ ಮಾರಾಟ ನಿಲ್ಲಿಸಲು ಆಗ್ರಹ

Published:
Updated:

ಬ್ಯಾಡಗಿ: ತಾಲ್ಲೂಕಿನ ಮಲ್ಲೂರು ಹಾಗೂ ಶಂಕ್ರಿಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣ ವಾಗಿ ನಿಷೇಧಿಸಿ   ಪಾನಮುಕ್ತ ಗ್ರಾಮವನ್ನಾಗಿ ಪರಿವರ್ತಿಸುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಗುರುವಾರ ಮಲ್ಲೂರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.  ಎರಡೂ ಗ್ರಾಮಗಳ ಮಹಿಳೆಯರು ಸಾಮಾಜಿಕ ಕಾರ್ಯಕರ್ತೆ ವನಿತಾ ಗುತ್ತಲ ಅವರ ನೇತೃತ್ವದಲ್ಲಿ  ಮೆರವಣೆಗೆ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ತಡೆಯಲು ವಿಫಲ ರಾಗಿರುವ ಅಬಕಾರಿ ಅಧಿಕಾರಿಯನ್ನು ಅಮಾನತ್ತು ಗೊಳಿಸುವಂತೆ ಒತ್ತಾಯಿ ಸಿದರು. 

 

ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಕ್ರಮ ಮದ್ಯ ಮಾರಾಟದಿಂದ ಸಾವಿರಾರು ಬಡ ಕುಟುಂಬಗಳು ಬೀದಿಗೆ ಬಂದಿವೆ. ಕುಡಿಯುವವರ ಸಂಖ್ಯೆ ಹೆಚ್ಚಾಗಿದ್ದು, ಹೆಚ್ಚಿನ ಪ್ರಮಾಣ ದಲ್ಲಿ ಯುವಕರೇ ಈ ಚಟಕ್ಕೆ ಬಲಿಯಾಗುತ್ತಿದ್ದಾರೆ.ಬಾರ್ ಮಾಲೀಕ ರೊಂದಿಗೆ ಶಾಮೀಲಾಗಿರುವ ಅಬಕಾರಿ ಅಧಿಕಾರಿಗಳು ಗ್ರಾಮದ ಗೂಡಂಗಡಿ ಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ದರು.ಅಕ್ರಮ ಮದ್ಯ ಮಾರಾಟವನ್ನು ತಡೆ ಗಟ್ಟಲು ಕಠಿಣ ಕ್ರಮಗಳನ್ನು ತೆಗೆದು ಕೊಳ್ಳುವಲ್ಲಿ ಸ್ಥಳೀಯ ಶಾಸಕರು ವಿಫಲ ವಾದಲ್ಲಿ ಮುಂದಿನ ದಿನಗಳಲ್ಲಿ ಅವರ ಮನೆ ಎದುರಿಗೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದರು. 

 

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಮ್ಮ ಜಾಧವ, ಸಾವಿತ್ರಾ ಕಮ್ಮಾರ, ನಾಗವೇಣಿ ಸಾಳುಂಕೆ, ಶಾರದಾ ಡಿಸ್ಲೆ, ರತ್ನವ್ವ ಚಲವಾದಿ, ಲತಾ ಸಂಕಣ್ಣನವರ, ಪ್ರೇಮಾ ಕೋಟಿ, ಸಾವಿತ್ರಾ ಬಡಿಗೇರ, ಅಕ್ಕಮ್ಮ ಶಿವಣ್ಣನವರ ಮತ್ತಿತರರು ಪಾಲ್ಗೊಂಡಿದ್ದರು.ತಹಶೀಲ್ದಾರರ ಪರವಾಗಿ  ಕಂದಾಯ ನಿರೀಕ್ಷಕ ಭೋಗಾರ ಅವರು ಮನವಿ  ಸ್ವೀಕರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ಭರವಸೆ ನೀಡಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry