ಶುಕ್ರವಾರ, ನವೆಂಬರ್ 22, 2019
22 °C

ಮದ್ಯ ಮಾರಾಟ ನಿಷೇಧ

Published:
Updated:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎ.ನಾರಾಯಣಪುರ ವಾರ್ಡ್‌ನ ಸದಸ್ಯ ಸ್ಥಾನಕ್ಕೆ ಏ.7ರಂದು ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಮಮೂರ್ತಿನಗರ ಮತ್ತು ಮಹದೇವಪುರ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.ಮತದಾನದ ಮುನ್ನ ದಿನವಾದ ಶನಿವಾರ (ಏ.6) ಬೆಳಿಗ್ಗೆ ಏಳು ಗಂಟೆಯಿಂದ ಭಾನುವಾರ ರಾತ್ರಿ 12 ಗಂಟೆವರೆಗೆ ಹಾಗೂ ಮತ ಎಣಿಕೆ ದಿನವಾದ ಏ.10ರಂದು ಬೆಳಿಗ್ಗೆ ಆರು ಗಂಟೆಯಿಂದ ರಾತ್ರಿ ಎಂಟು ಗಂಟೆವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ.

ರಾಮಮೂರ್ತಿನಗರ ಮತ್ತು ಮಹದೇವಪುರ ಠಾಣೆಯ ಮೂರು ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)