ಗುರುವಾರ , ಮೇ 13, 2021
40 °C

ಮಧುಗಿರಿಯಲ್ಲಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ: ಪಟ್ಟಣದಲ್ಲಿ ತುಮಕೂರು- ಮಧುಗಿರಿ ರಸ್ತೆ ದುರಸ್ತಿಗೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಬೃಹತ್ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿ ದೀಪ್ತಿ ದಿಲೀಪ್ ಮೆಹಂದಳೆ ಅವರಿಗೆ ಮನವಿ ಸಲ್ಲಿಸಿದರು.ಕಳೆದ 3 ವರ್ಷಗಳಿಂದ ಸಾರ್ವಜನಿಕರು ರಸ್ತೆ ದುರಸ್ತಿಗಾಗಿ ಅನೇಕ ಬಾರಿ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರೂ ಪೂರ್ಣ ಪ್ರಮಾಣದ ಕಾಮಗಾರಿ ನಡೆಸದೆ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸವನ್ನಷ್ಟೇ ಮಾಡಲಾ ಗಿದೆ.

ತುರ್ತು ಸಂದರ್ಭಗಳಲ್ಲಿ ಜಿಲ್ಲಾಸ್ಪತ್ರೆ ಮತ್ತು ಜಿಲ್ಲಾ ಕೇಂದ್ರಗಳಿಗೆ ತೆರಳುವಾಗ ಅಪಘಾತಗಳಿಂದ ಬಹಳಷ್ಟು ಪ್ರಾಣಹಾನಿಗಳು ಸಂಭವಿಸು ತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರ ದುರಸ್ತಿ ಕಾರ್ಯ ನಡೆಸದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದರು.ಪ್ರತಿಭಟನೆಯಲ್ಲಿ ಪುರಸಭೆ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಕನ್ನಡ ಜಾಗೃತಿ ವೇದಿಕೆಯ ಕೇಬಲ್ ಸುಬ್ಬು, ಮಾಜಿ ಅಧ್ಯಕ್ಷರಾದ ಕೆ.ಪ್ರಕಾಶ್, ಎಂ.ಎಸ್. ಚಂದ್ರಶೇಖರ್. ಡಿ.ಜಿ.ಶಂಕರ್ ನಾರಾಯಣಶೆಟ್ಟಿ, ಎಂ.ವಿ. ಗೋವಿಂದ ರಾಜು, ತ್ಯಾಗರಾಜು, ಅನಂತ ನಾರಾಯಣ ರಾಜು, ಜಗದೀಶ್ ಕುಮಾರ್, ರಾಜ್‌ಗೋಪಾಲ್, ಎಸ್‌ಎಲ್‌ವಿ ಶ್ರಿಧರ್, ಭದ್ರಣ್ಣ ಮುಂತಾದವರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.