ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಅವರನ್ನು ನೇಮಿಸಿರುವುದು ಸರಿಯಾದ ಕ್ರಮ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಮಧು ಅವರ ನೇಮಕ ವಿಷಯದಲ್ಲಿ ಗೊಂದಲವಿಲ್ಲ. ಪಕ್ಷದ ವರಿಷ್ಠರೆಲ್ಲ ಸೇರಿ ತೀರ್ಮಾನ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದರು.`

ಶುಕ್ರವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಬಿಜೆಪಿ ಮುಖಂಡ ಸಿ.ಮುನಿಕೃಷ್ಣ ಮತ್ತು ಅವರ ಬೆಂಬಲಿಗರನ್ನು ಜೆಡಿಎಸ್ಗೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು, `ಮೂರೂವರೆ ವರ್ಷ ಹುಚ್ಚನಂತೆ ರಾಜ್ಯ ಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಹೇಳಿರುವುದರಿಂದ ಬಿಜೆಪಿ ಸರ್ಕಾರ ಹುಚ್ಚರ ಸಂತೆ ಎಂಬುದು ಸಾಬೀತಾಗಿದೆ~ ಎಂದು ವ್ಯಂಗ್ಯವಾಡಿದರು.

ಪ್ರವಾಸ: ಫೆಬ್ರುವರಿ 10ರಂದು ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸ ಆರಂಭಿಸಲಾಗುವುದು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಮೊದಲಾದವರು ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಫೆಬ್ರುವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.

ಬಸನಗೌಡ ಪಾಟೀಲ ಯತ್ನಾಳ್, ಮಧು ಬಂಗಾರಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.