ಸೋಮವಾರ, ಮೇ 10, 2021
21 °C

ಮನುಷ್ಯನ ಸ್ವಾರ್ಥಕ್ಕೆ ಪರಿಸರ ಹಾನಿ: ವಿಷಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಮನುಷ್ಯ ನಡೆಸುವ ಕೆಲವು ಚಟುವಟಿಕೆಗಳಿಗೆ ಪರಿಸರ ಹಾಳಾಗುತ್ತಿದೆ' ಎಂದು ಸಂತ ಫ್ರಾನ್ಸಿಸ್ ಶಾಲೆಯ ಪ್ರಾಂಶುಪಾಲ ಶಾಂತ್‌ಪಾಲ್ ವಿಷಾದ ವ್ಯಕ್ತಪಡಿಸಿದರು.ನಗರದ ಸಂತ ಫ್ರಾನ್ಸಿಸ್ ಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆಯಾಗಿ ಮನುಷ್ಯ ಬದುಕುವುದಕ್ಕೆ ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಸಸಿ ನೆಟ್ಟರು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಪರಿಸರ ದಿನಾಚರಣೆಯ ಸಿದ್ಧತೆ ಮತ್ತು ಮಹತ್ವ ಕುರಿತು ನಾಟಕದ ಮೂಲಕ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಬರ್ತೋಳ್ಡ್, ಚಾರ್ಲ್ಸ್, ಆ್ಯಗ್ನೇಲ್ ಆಲ್ಮೆಡಾ ಶಿಕ್ಷಕರು ಹಾಜರಿದ್ದರು.ವಿಶ್ವ ಪರಿಸರ ದಿನಾಚರಣೆ

ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಿಗಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬುಧವಾರ ವಿಶ್ವ ಪರಿಸರ ದಿನಾಚರಣೆ ನಡೆಯಿತು.ಸಂಸ್ಥೆಯ ಯೋಜನಾಧಿಕಾರಿ ಮಾಧವಗೌಡ ಮಾತನಾಡಿ, ಉತ್ತಮ ಆರೋಗ್ಯ ಪಡೆದುಕೊಳ್ಳಲು ಪರಿಸರವನ್ನು ಶುಚಿಯಾಗಿಟ್ಟು ಕೊಳ್ಳಬೇಕು. ಮುಂದಿನ ಜನಾಂಗಕ್ಕೆ ಉಡುಗೊರೆ ನೀಡಲು ಪ್ರತಿಯೊಬ್ಬ ಸದಸ್ಯರು ಗಿಡ ನೆಟ್ಟು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್. ಮರಿಸ್ವಾಮಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸದಸ್ಯ ಎಂ. ನಾಗರಾಜ್, ರಮೇಶ್‌ಬಾಬು, ರಘುರಾಜ್, ದರ್ಣಪ್ಪಗೌಡ, ಸೇವಾಪ್ರತಿನಿಧಿ ನಾಗಮಣಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.