ಮನೆಗಳಿಗೆ ಸೌಲಭ್ಯ: ಶಾಸಕರ ಆದೇಶ

ಭಾನುವಾರ, ಜೂಲೈ 21, 2019
21 °C

ಮನೆಗಳಿಗೆ ಸೌಲಭ್ಯ: ಶಾಸಕರ ಆದೇಶ

Published:
Updated:

ಮಾಗಡಿ: ಗ್ರಾಮ ಪಂಚಾಯಿತಿಯ ಅನುಮತಿ ಪಡೆಯದೆ ಗ್ರಾಮದ ಹೊರವಲಯದ ಜಮೀನುಗಳಲ್ಲಿ ನಿರ್ಮಿಸಿಕೊಂಡಿರುವ ಮನೆಗಳಿಗೆ ಅರ್ಹ ಸೌಲಭ್ಯಗಳನ್ನು ಕಲ್ಪಿಸುವಂತೆ ಶಾಸಕ ಎಚ್.ಸಿ ಬಾಲಕೃಷ್ಣ ಅಧಿಕಾರಿಗಳಿಗೆ ಆದೇಶಿಸಿದರು.ಕುದೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ಮರೂರುನಿಂದ-ಕುದೂರುವರೆಗೆ ರಸ್ತೆಯ ಬದಿಗಳಲ್ಲಿ ಗಿಡ ನೆಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದರು. ಈ ಸಂಬಂಧ ಶಾಸಕರು  ಸಾಮಾಜಿಕ ವಲಯ ಅರಣ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಗ್ರಾಮದ ಸಮಸ್ಯೆಗಳು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲಾಯಿತು.ಜಿಲ್ಲೂಕು ಪಂಚಾಯಿತಿ ಸದಸ್ಯೆ ಹಂಸ ಕುಮಾರಿ, ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ ಧನಂಜಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಮಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯ ಸತ್ಯನಾರಾಯಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ ಬಾಲರಾಜು, ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ, ಪಿ.ಡಿ.ಓ ಸಯದ್ ಶಮೀರ್, ಗ್ರಾ.ಪಂ ಸದಸ್ಯ ಸಯ್ಯದ್ ಇಬ್ರಾಹಿಂ  ಇತರರು ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry