ಮನೆಗೆ ಬೆಂಕಿ: ವ್ಯಕ್ತಿ ಸಜೀವ ದಹನ

ರಾಣೇಬೆನ್ನೂರು: ಮನೆಗೆ ಬೆಂಕಿ ಬಿದ್ದು, ವ್ಯಕ್ತಿಯೊಬ್ಬರು ಸಜೀವ ದಹನವಾದ ದಾರುಣ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕು ಮೈದೂರು ಫ್ಲಾಟ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮನೆಯ ಸುತ್ತಮುತ್ತ ಬಣವೆಗಳಿದ್ದು, ರಾತ್ರಿ 9.30ರಿಂದ 10ರ ಸುಮಾರಿಗೆ ಹೊತ್ತಿಕೊಂಡ ಬೆಂಕಿ ಮೂರು ಬಣವೆಗಳು ಹಾಗೂ ಎರಡು ಮನೆಗಳಿಗೆ ವ್ಯಾಪಿಸಿದೆ. ಮನೆಯಲ್ಲಿ ಮಲಗಿದ್ದ ದ್ಯಾಮಪ್ಪ ಹರಿಜನ(25) ಎಂಬುವರು ಸಜೀವ ದಹನವಾಗಿದ್ದಾರೆ. ಈ ಬಗ್ಗೆ ಸ್ಥಳೀಯರು ಶನಿವಾರ ಮಾಹಿತಿ ನೀಡಿದ್ದಾರೆ.
ದ್ಯಾಮಪ್ಪ ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಬೆಂಕಿಯ ಜ್ವಾಲೆ ವ್ಯಾಪಿಸುತ್ತಿದ್ದಂತೆ ಸ್ಥಳಿಯರು ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಶರ್ಟ್ ಸರ್ಕೀಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.