ಮನೆಗೆ ವಾಪಸಾದ ಮಂಡೇಲಾ

7

ಮನೆಗೆ ವಾಪಸಾದ ಮಂಡೇಲಾ

Published:
Updated:

ಜೋಹಾನ್ಸ್‌ಬರ್ಗ್ (ಪಿಟಿಐ): ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರು ಭಾನುವಾರ ಮನೆಗೆ ತೆರಳಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷರ ಕಚೇರಿಯ ಮೂಲಗಳು ತಿಳಿಸಿವೆ.ಪ್ರಿಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 95 ವರ್ಷದ ಮಂಡೆಲಾ ಅವರು, ಭಾನುವಾರ ಮುಂಜಾನೆ ಜೋಹಾನ್ಸ್‌ಬರ್ಗ್‌ನಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದರು. ಮಂಡೇಲಾ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆಯನ್ನು ಮಂಡೇಲಾ ಅವರ ಮನೆಯಲ್ಲೂ ಮುಂದುವರಿಸಲಾಗುವುದು ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಜಾಕೂಬ್ ಜುಮ್ಮಾ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry