ಮಂಗಳವಾರ, ಜೂನ್ 15, 2021
22 °C

ಮನೆ ತೆರವಿಗೆ ಬಿಡುವುದಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಬೆಟ್ಟಹಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲುಕುಂಟೆ ಗ್ರಾಮದ ಸರ್ಕಾರಿ ಜಾಗದಲ್ಲಿ  ನಿರ್ಮಿಸಿರುವ ಬಡಜನರ ಮನೆಗಳನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಕೃಷ್ಣ ಬೈರೇಗೌಡ ಹೇಳಿದರು.ಬೆಟ್ಟಹಲಸೂರು ಗ್ರಾಮದ ಕರೇಕಲ್ಲು ಹಾಗೂ ಗಂಗಾನಗರ ಬಡಾವಣೆಗಳಲ್ಲಿ ಶಾಸಕರ ಮತ್ತು ಜಿ.ಪಂ. ಅನುದಾನದಡಿ ಚರಂಡಿ ಮೇಲೆ ಸ್ಲ್ಯಾಬ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡು ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಬಡ ಜನರ ಮನೆಗಳನ್ನು ತೆರವುಗೊಳಿಸಲು ಕಂದಾಯ ಅಧಿಕಾರಿಗಳು ನೋಟಿಸ್ ನೀಡಿರುವುದು ಸರಿಯಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಈಗಾಗಲೇ ಅಲ್ಲಿನ ನಿವಾಸಿಗಳು 94 `ಸಿ~ ಅಡಿಯಲ್ಲಿ ಅರ್ಜಿ ಸಲ್ಲಿಸಿರುವುದರಿಂದ ಕಾನೂನಿನ ಪ್ರಕಾರ ಆ ಮನೆಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ. ಜಿಲ್ಲಾಧಿಕಾರಿಗಳು ಕೂಡಲೇ ಈ ಆದೇಶವನ್ನು ವಾಪಸ್ ಪಡೆದು ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ವಿಸ್ತರಣೆ: ಇದೇ ಸಂದರ್ಭದಲ್ಲಿ ಕುದುರೆಗೆರೆ ಗ್ರಾಮದಿಂದ ಕುದುರೆಗೆರೆ ಕಾಲೋನಿಗೆ 283 ಬಿ ಹಾಗೂ 283ಡಿ ಸಂಖ್ಯೆಯ ಬಿಎಂಟಿಸಿ ಬಸ್‌ಗಳ ಸಂಚಾರ ವಿಸ್ತರಣಾ ಕಾರ್ಯಕ್ಕೆ ಶಾಸಕರು ಚಾಲನೆ ನೀಡಿದರು.ಜಿ.ಪಂ. ಸದಸ್ಯರಾದ ಕೆ.ಅಶೋಕನ್, ದಾನೇಗೌಡ, ಗ್ರಾ.ಪಂ.ಅಧ್ಯಕ್ಷ ಆಂಜಿನಪ್ಪ, ಉಪಾಧ್ಯಕ್ಷೆ ಸುಮಿತ್ರಾ ರಾಜಣ್ಣ, ಮಾಜಿ ಅಧ್ಯಕ್ಷರಾದ ಬಿ.ಕೆ.ಮಂಜುನಾಥಗೌಡ, ನಾರಾಯಣಗೌಡ, ಕೆ.ಶ್ರೀನಿವಾಸಯ್ಯ, ಬೆಂಗಳೂರು ಹಾಲು ಒಕ್ಕೂಟದ ಮಾಜಿ ನಿರ್ದೇಶಕ ಟಿ.ಎಂ.ಶ್ರೀರಾಮ್ ಮತ್ತಿತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.