ಮನೆ ತೆರವು ನಿರ್ಣಯ ಖಂಡಿಸಿ ಪ್ರತಿಭಟನೆ

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಮನೆ ತೆರವು ನಿರ್ಣಯ ಖಂಡಿಸಿ ಪ್ರತಿಭಟನೆ

Published:
Updated:

ಧಾರವಾಡ: ಹುಬ್ಬಳ್ಳಿಯ ವಾರ್ಡ್ ಸಂ.27 ವ್ಯಾಪ್ತಿಯ ಸರ್ವೆ ನಂ.68ರಲ್ಲಿ ಮನೆ ಕಟ್ಟಿಕೊಂಡು ವಾಸವಾಗಿರುವ ನಿವಾಸಿಗಳನ್ನು ತೆರವುಗೊಳಿಸುವ ಕ್ರಮವನ್ನು ಖಂಡಿಸಿ ಸುಭಾನಿ ನಗರ ಹಾಗೂ ಗವಿಸಿದ್ದೇಶ್ವರ ನಗರದ ನೂರಾರು ನಿವಾಸಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಈ ಮನೆಗಳು ಅನಧಿಕೃತವಾಗಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರ್ ಡಾ.ಕೆ.ರಾಮಚಂದ್ರರಾವ್ ಕಿಮ್ಸ ನಿರ್ದೇಶಕಿ ಡಾ.ವಸಂತಾ ಕಾಮತ್ ಅವರಿಗೆ ಜೂನ್ 6ರಂದು ಪತ್ರ ಬರೆದಿದ್ದು, ಸೂಕ್ತ ಬಂದೋಬಸ್ತ್ ನೀಡಲು ದಿನಾಂಕ ಹಾಗೂ ಸಮಯ ತಿಳಿಸಬೇಕು ಎಂದು ಕೋರಿರುವುದು ಇಲ್ಲಿನ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ. ಕಳೆದ 45 ವರ್ಷಗಳಿಂದ ಈ ಸರ್ವೆ ನಂಬರ್‌ನಲ್ಲಿ ವಾಸವಾಗಿದ್ದು, ಪಾಲಿಕೆಗೆ ನೀರಿನ ಕರ, ಆಸ್ತಿ ಕರ, ವಿದ್ಯುತ್ ಬಿಲ್ ತುಂಬಲಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಾಲಿಕೆಯ ಮಾಜಿ ಸದಸ್ಯ ತಿಪ್ಪಣ್ಣ ಮಜ್ಜಗಿ, `ಇಲ್ಲಿ ಸುಮಾರು 200 ಕುಟುಂಬಗಳು ವಾಸವಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಬದುಕುತ್ತಿವೆ. ಕಿಮ್ಸಗೆ ಲೀಸ್ ಆಧಾರದ ಮೇಲೆ ಅರಣ್ಯ ಇಲಾಖೆ ನೀಡಿದ ಜಾಗ ಯಾವುದು ಎಂಬುದು  ತಿಳಿದು ಬಂದಿಲ್ಲ.

ಹಾಗಿದ್ದ ಮೇಲೆ ಇವರ ಮನೆಗಳನ್ನು ಏಕೆ ಕೆಡವಬೇಕು? ಇಲ್ಲಿ ವಾಸಿಸುವ ಜನರ ಹಿತರಕ್ಷಣೆಗಾಗಿ ಜಿಲ್ಲಾಧಿಕಾರಿಗಳು ಮನೆ ತೆರವುಗೊಳಿಸುವ ನಿರ್ಧಾರ ಕೈಬಿಡುವಂತೆ ಅಗತ್ಯ ನಿರ್ದೇಶನ ನೀಡಬೇಕು. ಇಲ್ಲದಿದ್ದರೆ ಮುಂದೆ ಇನ್ನೂ ಉಗ್ರ ಹೋರಾಟ ಮಾಡಲಾಗುವುದು~ ಎಂದರು.ಚಂದ್ರಶೇಖರ ಬೆಳಗೇರಿ, ದೇವರಾಜ ಭಜಂತ್ರಿ, ಇಮಾಮ್‌ಸಾಬ್ ಗರಗದ, ಸುಮಿತ್ರಾ ಬೆಳಗೇರಿ, ಸಿದ್ದಪ್ಪ ಪೂಜಾರ, ಕಲ್ಲಪ್ಪ ಮುಳಗುಂದ, ರುಕ್ಮಮ್ಮ ವಾಡಕರ ಭಾಗವಹಿಸಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry