ಮನೆ ಮನೆಗೆ ಸಸಿ ವಿತರಣಾ ಕಾರ್ಯಕ್ರಮ

ಗುರುವಾರ , ಜೂಲೈ 18, 2019
24 °C

ಮನೆ ಮನೆಗೆ ಸಸಿ ವಿತರಣಾ ಕಾರ್ಯಕ್ರಮ

Published:
Updated:

ಚಿತ್ರದುರ್ಗ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ನಗರದ ಗೋಪಾಲಪುರ ಬಡಾವಣೆಯಲ್ಲಿ ಕಾರ್ಯಕರ್ತರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಮನೆ ಮನೆಗೆ ಸಸಿ ವಿತರಣೆಯ ಕಾರ್ಯಕ್ರಮ ನಡೆಯಿತು.ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ಜನ್ಮದಿನ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸಿ. ಮಹಾಲಿಂಗಪ್ಪ ಪರಿಸರ ಪ್ರಜ್ಞೆ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್ 500 ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿದರು.ಶಾಲಾ ಮಕ್ಕಳಿಗೆ ಕನ್ನಡದ ಜವಾಬ್ದಾರಿ ಜತೆಗೆ, ಪರಿಸರ ಕಳಕಳಿ ಬೆಳೆಸುವ ಉದ್ದೇಶದಿಂದ ಕರವೇ ಕಾರ್ಯಕರ್ತರು `ಕರವೇ ಉಸಿರು, ನಾಡಿನ ಹಸಿರು~ ಶೀರ್ಷಿಕೆ ಅಡಿ ಬಡಾವಣೆಯ ಸಾವಿರಾರು ಮನೆಗಳಿಗೆ ಮಕ್ಕಳಿಂದ ಸಸಿ ವಿತರಿಸಿದರು.ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಟಿ. ರಮೇಶ್, ಮಹಿಳಾ ಘಟಕದ ಅಧ್ಯಕ್ಷೆ ಟಿ.ವಿ. ಜಯಶೀಲಾ, ಮಾತೃಶ್ರೀ ವಿದ್ಯಾಸಂಸ್ಥೆ ಕಾರ್ಯದರ್ಶಿ ಪ್ರಶಾಂತ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎಸ್.ವಿ. ಮೂರ್ತಿ, ಕಾರ್ಯಕರ್ತರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry