ಮಂಗಳವಾರ, ಜೂನ್ 22, 2021
29 °C

ಮಮತಾ ಜತೆ ಪ್ರಧಾನಿ ಚರ್ಚೆ ಇಲ್ಲ: ಸರ್ಕಾರ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಕಾಶ್ ಸಿಂಗ್ ಬಾದಲ್ ಅಧಿಕಾರ ಸ್ವೀಕರಿಸುವ ಸಮಾರಂಭಕ್ಕೆ ತೆರಳಬಾರದೆಂದು ಮಮತಾ ಬ್ಯಾನರ್ಜಿ ಅವರ ಜತೆ ಪ್ರಧಾನಿ ಮನಮೋಹನ್ ಸಿಂಗ್ ಮಾತುಕತೆ ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

`ಈ ಸಂಬಂಧ ಪ್ರಧಾನಿ ಅವರಾಗಲೀ ಅಥವಾ ಹಣಕಾಸು ಸಚಿವರಾಗಲೀ ಮಮತಾ ಅವರೊಂದಿಗೆ ಚರ್ಚೆ ನಡೆಸಿಲ್ಲ~ ಎಂದು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ರಾಜೀವ್ ಶುಕ್ಲ ಇಲ್ಲಿ ಸುದ್ದಿಗಾರರಿಗೆ ಹೇಳಿದ್ದಾರೆ.

ಪ್ರಧಾನಿ ಮತ್ತು ಗೃಹ ಸಚಿವರು ಮಾತುಕತೆ ನಡೆಸಿದ ನಂತರ ಮಮತಾ ಬ್ಯಾನರ್ಜಿಯವರು ಪ್ರಕಾಶ್ ಸಿಂಗ್  ಪ್ರಮಾಣ ವಚನ ಸ್ವೀಕಾರದಲ್ಲಿ ಪಾಲ್ಗೊಳ್ಳದಿರುವ ನಿರ್ಧಾರ ಕೈಗೊಂಡರು ಎಂಬ ವರದಿಗಳ ಹಿನ್ನೆಲೆಯಲ್ಲಿ ಶುಕ್ಲ ಹೀಗೆ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.