ಶುಕ್ರವಾರ, ಫೆಬ್ರವರಿ 26, 2021
20 °C

ಮಮತಾ ಬ್ಯಾನರ್ಜಿ ಪರ ಪ್ರಚಾರ: ಅಣ್ಣಾ ಹಜಾರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಮತಾ ಬ್ಯಾನರ್ಜಿ ಪರ ಪ್ರಚಾರ: ಅಣ್ಣಾ ಹಜಾರೆ

ನವದೆಹಲಿ (ಪಿಟಿಐ): ಮುಂಬುರುವ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಪರವಾಗಿ ಪ್ರಚಾರ ಮಾಡುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬುಧವಾರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಮತಾ ಬ್ಯಾನರ್ಜಿ ಅವರ ಸರಳ ಜೀವನ ಮತ್ತು ಸಾಮಾನ್ಯ ಜನರ ಬಗ್ಗೆ ಅವರಿಗಿರುವ ಕಾಳಜಿಯಿಂದಾಗಿ ಬರುವ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿಯನ್ನು ಬೆಂಬಲಿಸುವುದಾಗಿ   ಅವರು ತಿಳಿಸಿದರು.ಕಳೆದ ನಾಲ್ಕು ತಿಂಗಳ ಹಿಂದೆ ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗೆ ದೇಶದ ಅಭಿವೃದ್ಧಿ ಕುರಿತಂತೆ 17 ಅಂಶಗಳನ್ನು ಪ್ರಸ್ತಾಪಿಸಿ ಪತ್ರ ಬರೆದಿದ್ದೆ. ತಾವು ಬರೆದ ಪತ್ರಕ್ಕೆ ಮಮತಾ ಬ್ಯಾನರ್ಜಿ ಸಮರ್ಪಕ ಉತ್ತರ ನೀಡಿರುವುದರಿಂದ ಅವರನ್ನು ಬೆಂಬಲಿಸುವುದಾಗಿ ಹೇಳಿದರು.17 ಅಂಶಗಳ ಪತ್ರಕ್ಕೆ ಅರವಿಂದ್‌ ಕೇಜ್ರಿವಾಲ್‌ ಉತ್ತರಿಸಿಲ್ಲವಾದ್ದರಿಂದ ಎಎಪಿ ಪಕ್ಷವನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.