ಶುಕ್ರವಾರ, ಏಪ್ರಿಲ್ 16, 2021
25 °C

ಮಮತಾ ವಿರುದ್ಧ ಹರಿಹಾಯ್ದ ಖಟ್ಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  ಸಾರ್ವಜನಿಕ ಸಭೆಯೊಂದರಲ್ಲಿ ತಮ್ಮನ್ನು ಪ್ರಶ್ನಿಸಿದ ವ್ಯಕ್ತಿಯೊಬ್ಬನ ಬಂಧನಕ್ಕೆ ಆದೇಶ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದು, ತಿಕ್ಕಲುತನದಿಂದ ವರ್ತಿಸುತ್ತಿದ್ದಾರೆ ಎಂದು ಪತ್ರಿಕಾ ಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಮಾರ್ಕಂಡೇಯ ಖಟ್ಜು ಕಟುವಾಗಿ ಟೀಕಿಸಿದ್ದಾರೆ.ರೈತರಿಗೆ ನೆರವಿಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಸಾರ್ವಜನಿಕ ಸಭೆಯಲ್ಲಿ ಪ್ರಶ್ನಿಸಿದ್ದಕ್ಕಾಗಿ ಶಿಲಾದಿತ್ಯ ಚೌಧರಿ ಎಂಬಾತನಿಗೆ ಮಾವೊವಾದಿ ಹಣೆಪಟ್ಟಿ ಹಚ್ಚಿ ಬಂಧಿಸಿರುವುದು ಸರ್ಕಾರಿ ಯಂತ್ರದ ಸಂಪೂರ್ಣ ದುರುಪಯೋಗವಾಗಿದೆ ಮತ್ತು ಸಂವಿಧಾನಿಕ ಹಾಗೂ ಮಾನವ ಹಕ್ಕುಗಳ ನೇರ ಉಲ್ಲಂಘನೆಯಾಗಿದೆ ಎಂದೂ ಖಟ್ಟು ಖಂಡಿಸಿದ್ದಾರೆ.ಮಮತಾ ಅವರ ಈ ಕ್ರಮಕ್ಕೆ ಬಿಜೆಪಿ ಹಾಗೂ ಸಿಪಿಎಂ ಸಹ ತೀವ್ರ ವಿರೋಧ ವ್ಯಕ್ತಪಡಿಸಿವೆ. ನಾಗರಿಕರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದು ರಾಜಕೀಯ ನಾಯಕರ ಕರ್ತವ್ಯ ಎಂದು ಬಿಜೆಪಿ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.