ಬೆಹ್ರಾಂಪುರ/ ಕೋಲ್ಕತ್ತ: ಪಶ್ಚಿಮ ಬಂಗಾಳದ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳೇ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಥಳಿಸಿದ ಘಟನೆಗಳಿಗೆ ಸಂಬಂಧಿಸಿದಂತೆ ಹಣಕಾಸು ಸಚಿವ ಪ್ರಣವ್ ಮುಖರ್ಜಿ, ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

`ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಮಂಡಳಿಯ ನಡುವೆ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ, ಇದು ವಿದ್ಯಾರ್ಥಿಗಳೇ ಶಿಕ್ಷಕರನ್ನು ಥಳಿಸುವ ಮಟ್ಟಕ್ಕೆ ಹೋಗಬಾರದು. ಇದು ಸರಿಯಲ್ಲ, ಹಾಗೆಯೇ ಸಹಿಸಲೂ ಸಾಧ್ಯವಿಲ್ಲ~ ಎಂದು ಪ್ರಣವ್ ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ದಿನಾಜ್ಪುರದ ರಾಯ್ಗಂಜ್ ಸರ್ಕಾರಿ ಕಾಲೇಜಿನಲ್ಲಿ ಕೆಲ ದಿನಗಳ ಹಿಂದೆ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ತೃಣಮೂಲ ಛಾತ್ರ ಪರಿಷತ್ (ಟಿಎಂಸಿಪಿ) ಬೆಂಬಲಿಗರು ಮತ್ತು ಕಾಲೇಜು ಪ್ರಾಂಶುಪಾಲರು, ಶಿಕ್ಷಕರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವಾಗ್ವಾದ ವಿಕೋಪಕ್ಕೆ ತಿರುಗಿ ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಕೈಮಾಡಿದ್ದರು. ಬಿರ್ಭಮ್ ಜಿಲ್ಲೆಯ ಕಾಲೇಜೊಂದರಲ್ಲಿ ತೃಣಮೂಲ ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಹೊಡೆದಿದ್ದರು.

ನಡಿಯಾ ಜಿಲ್ಲೆಯ ಮಜ್ದಿಯಾ ಕಾಲೇಜಿನಲ್ಲಿ ಸಹ ಸಿಪಿಎಂನ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರಾಂಶುಪಾಲರಿಗೆ ಥಳಿಸಿದ ಘಟನೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.