ಮರಕ್ಕೆ ಕಾರು ಡಿಕ್ಕಿ: ಇಬ್ಬರು ವಿದ್ಯಾರ್ಥಿ ಸಾವು
ಮೈಸೂರು (ಪಿಟಿಐ): ರಸ್ತೆ ಬದಿಯ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಅದರಲ್ಲಿದ್ದ ಇಬ್ಬರು ಸಾವಿಗೀಡಾದ ಘಟನೆ ಇಲ್ಲಿಗೆ ಸಮೀಪದ ಊಟಿ-ನಂಜನಗೂಡು ಮಾರ್ಗದಲ್ಲಿ ಸೋಮವಾರ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಜೊತೆಗೆ ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.
ಮೃತರನ್ನು ಅಕ್ಷಯ್ (23) ಮತ್ತು ಪ್ರವೀಣ್ (24) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ನಂಜನಗೂಡಿನ ಜೆಎಸ್ ಎಸ್ ಪಾಲಿಟೆಕ್ನಿಕ್ ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಅತಿವೇಗದಿಂದ ಕಾರು ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಪೋಲಿಸರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.