ಮರಕ್ಕೆ ಕಾರು ಡಿಕ್ಕಿ: ಮೂವರು ಯುವಕರು ಸಾವು

7

ಮರಕ್ಕೆ ಕಾರು ಡಿಕ್ಕಿ: ಮೂವರು ಯುವಕರು ಸಾವು

Published:
Updated:

ಬೆಂಗಳೂರು: ಹೆಣ್ಣೂರು ಜಂಕ್ಷನ್ ಬಳಿ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವ, ಶ್ಯಾಮ್ ಮತ್ತು ಅನಿಲ್ ಎಂಬುವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಯುವಕರು ಗಂಭೀವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕಾಚರನಕಹಳ್ಳಿ ಮತ್ತು ಲಿಂಗರಾಜಪುರದವರು ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಬೆಂಕಿ: ಹೈಕೋರ್ಟ್ ನ್ಯಾಯಮೂರ್ತಿ   ಜಾವೇದ್ ರಹೀಂ ಅವರ ಕೊಠಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿ, ಕೆಲ ಕಾಲ ಆತಂಕ ನಿರ್ಮಾಣವಾಗಿತ್ತು. ತಕ್ಷಣ ಅಲ್ಲಿದ್ದ ಸಿಬ್ಬಂದಿ ತುರ್ತು ಕ್ರಮ ತೆಗೆದುಕೊಂಡು, ಬೆಂಕಿ ನಂದಿಸಿದರು. ಎರಡು ಕುರ್ಚಿಗಳು ಸುಟ್ಟು ಹೋಗಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry