ಭಾನುವಾರ, ಮೇ 9, 2021
18 °C

ಮರಕ್ಕೆ ಟೆಂಪೊ ಡಿಕ್ಕಿ: 28 ಜನರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ದ್ರಾಕ್ಷಿ ಕಟಾವಿಗೆ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 28 ಮಂದಿ ಗಾಯಗೊಂಡಿರುವ ಘಟನೆ ಇಲ್ಲಿನ ಇರಿಗೇನಹಳ್ಳಿ ಗೇಟ್ ಸಮೀಪ ನಡೆದಿದೆ.ದ್ರಾಕ್ಷಿ ಕಟಾವಿಗಾಗಿ ತಾಲ್ಲೂಕಿನ ಬೀಡಿಗಾನಹಳ್ಳಿ ಗ್ರಾಮದಿಂದ ಪ್ರತಿದಿನ ವಿಜಯಪುರದ ಟೆಂಪೋ ಕಾರ್ಮಿಕರನ್ನು ಕರೆತರಲಾಗುತ್ತಿತ್ತು. ಸೋಮವಾರ ಬೆಳಿಗ್ಗೆ ಆಂಧ್ರ ಮೂಲದವರನ್ನು ಕೆಲಸಕ್ಕೆಂದು ಕರೆತರುವಾಗ ಚಾಲಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್, ಬೋರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.