ಕೋಲಾರ:  ನಗರದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಕೊಠಡಿಗಳ ಕೊರತೆಯ ಪರಿಣಾಮವಾಗಿ ಮರದ ಕೆಳಗೆ ತರಗತಿಗಳನ್ನು ನಡೆಸಲಾಗುತ್ತಿದೆ.

ತಾಲ್ಲೂಕಿನ ಮಂಗಸಂದ್ರದ ಸಮೀಪ ನಿರ್ಮಾಣವಾಗುತ್ತಿರುವ ಕೇಂದ್ರದ ಹೊಸ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಗುರುವಾರವಷ್ಟೇ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಶುಕ್ರವಾರದಿಂದ ಮರದ ಕೆಳಗೆ ಕುಳಿತು ಪಾಠ ಕೇಳುತ್ತಿದ್ದಾರೆ.

ಬಾಲಕರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡದಲ್ಲಿ 15 ವರ್ಷದಿಂದ ಸ್ನಾತಕೋತ್ತರ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಕಾಲೇಜಿನಲ್ಲಿ ಮೂರು ಹೊಸ ಸ್ನಾತಕೋತ್ತರ ವಿಭಾಗಗಳೂ ಕಾರ್ಯ ನಿರ್ವಹಿಸುತ್ತಿರುವುದರಿಂದ ತರಗತಿ ನಡೆಸಲು ಜಾಗ ಸಾಕಾಗುತ್ತಿಲ್ಲ. ಹೀಗಾಗಿ ಕೂಡಲೇ ಕಟ್ಟಡವನ್ನು ಬಿಟ್ಟುಕೊಡಬೇಕು ಎಂದು ಕಾಲೇಜು ಮುಖ್ಯಸ್ಥರು ಕೇಂದ್ರದ ಮುಖ್ಯಸ್ಥರನ್ನು ಕೋರಿದ್ದಾರೆ.

`ಇಂಥ ಸಂದರ್ಭದಲ್ಲಿ ತರಗತಿಗಳನ್ನು ಮರದ ಕೆಳಗೆ ನಡೆಸುತ್ತಿದ್ದೇವೆ. ಅಷ್ಟೆ ಅಲ್ಲದೆ, ಈಗಿನ ಕೇಂದ್ರದಲ್ಲಿ ಮೂಲ ಸೌಕರ್ಯಗಳೂ ಇಲ್ಲ~ ಎಂದು ಸಿಬ್ಬಂದಿಯೊಬ್ಬರು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.