ಕುಶಾಲನಗರ: ಅರ್ಧಕ್ಕೆ ಶಾಲೆ ಬಿಟ್ಟ ಬಾಲಕಿಯನ್ನು ಗುರುತಿಸಿ ಮರಳಿ ಶಾಲೆಗೆ ತರುವ ಮೂಲಕ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಶಾಲೆಗಾಗಿ ನಾವು-ನೀವು ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಳೆದ ಶೈಕ್ಷಣಿಕ ಸಾಲಿನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಸ್ಮಾ ಎಂಬ ಬಾಲಕಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ಶಾಲೆಯನ್ನು ಅರ್ಧಕ್ಕೆ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದನ್ನು ಪತ್ತೆ ಹಚ್ಚಿ ಶಾಲೆಗೆ ಮರು ಸೇರ್ಪಡೆಗೊಳಿಸುವಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಶ್ರಮಿಸಿರುವುದನ್ನು ಈ ಸಂದರ್ಭ ಜನಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಪಿ.ನಾಗೇಶ್ ನೇತೃತ್ವದಲ್ಲಿ ಸದಸ್ಯರು ಶಾಲೆ ಬಿಟ್ಟ ಮಕ್ಕಳ ಮನೆ ಮನೆಗೆ ಭೇಟಿ ಮಾಡಿ ವಿದ್ಯಾರ್ಥಿ ಹಾಗೂ ಪೋಷಕರನ್ನು ಮನವೊಲಿಸುವ ಮೂಲಕ ಅಸ್ಮಾ ಎಂಬ ಬಾಲಕಿಯನ್ನು ಮರಳಿ ಶಾಲೆಗೆ ಕರೆತಂದು ಎಸ್ಎಸ್ಎಲ್ಸಿ ತರಗತಿಗೆ ದಾಖಲಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಅಸ್ಮಾಳ ವಿದ್ಯಾಭ್ಯಾಸಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ತಾವು ಭರಿಸುವುದಾಗಿ ತಿಳಿಸಿದ ವಿ.ಪಿ.ನಾಗೇಶ್ ಅಸ್ಮಾಳನ್ನು ಶಾಲಾ ಕಲಿಕೆಗಾಗಿ ದತ್ತು ಪಡೆದರು.

ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರರಾಜೇಅರಸ್ ಮಾತನಾಡಿ, 6 ರಿಂದ 14 ವಯಸ್ಸಿನ ಎಲ್ಲ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಸೌಲಭ್ಯವಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ.ಶಶಿಧರ್ ಶಾಲೆಯಿಂದ ನೀಡಲಾದ ಉಚಿತ ಪಠ್ಯಪುಸ್ತಕವನ್ನು ಅಸ್ಮಾಗೆ ವಿತರಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ಜೋಸೆಫ್ ವಿಕ್ಟರ್ ಸೋನ್ಸ್, ಡಿ.ಕೆ.ತಿಮ್ಮಪ್ಪ, ಪಿ.ಪಿ.ಸತ್ಯನಾರಾಯಣ, ಎಂ.ವಿ.ನಾರಾಯಣ, ಮುಖಂಡರಾದ ಜಿ.ಎಲ್.ನಾಗರಾಜು, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಟಿ.ವಸಂತ, ಡಯಟ್ ಹಿರಿಯ ಉಪನ್ಯಾಸಕ ಡಾ.ಡಿ.ವಿ.ಕಾಂತ, ಮುಖ್ಯಶಿಕ್ಷಕಿ ಪುಷ್ಪ ಹಾಜರಿದ್ದರು.

ಮಕ್ಕಳ ಶಿಕ್ಷಣದ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ ಅಗತ್ಯ
ಕುಶಾಲನಗರ: ಮಕ್ಕಳ ಶಿಕ್ಷಣದ ಹಕ್ಕು ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯುವಂಥ ವಾತಾವರಣ ಕಲ್ಪಿಸಲು ಎಲ್ಲರೂ ಶ್ರಮಿಸಬೇಕು ಎಂದು ಕುಶಾಲನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಎಸ್.ಪಿ.ಚರಿತಾ ಗುರುವಾರ ಇಲ್ಲಿ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಶಾಲೆಗಾಗಿ ನಾವು-ನೀವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ವಂಚಿತ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಕರೆತರುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರೊಂದಿಗೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶ್ರಮಿಸಬೇಕು ಎಂದು ಚರಿತಾ ಸಲಹೆ ನೀಡಿದರು.

ಚೈಹಿಕ ಶಿಕ್ಷಣ ಶಿಕ್ಷಕ ಸದಾಶಿವ ಎಸ್. ಪಲ್ಲೇದ್ ಮಕ್ಕಳ ಶಿಕ್ಷಣ ಹಕ್ಕುಗಳ ಕುರಿತು ವಿಚಾರ ಮಂಡಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎನ್.ವಸಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಸದಸ್ಯರಾದ ಡಿ.ಎಸ್.ಯೋಗೇಶ್, ಮೇಹರುನ್ನೀಸಾ, ಕಮಲಾಕ್ಷಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಸರೋಜ ಚೀಯಣ್ಣ, ಜೀವನ್ಮಿತ್ರ, ಕೆ.ಬಿ.ರಾಜು, ಮುಖ್ಯಶಿಕ್ಷಕ ಎ.ಸಿ.ಮಂಜುನಾಥ್, ಶಿಕ್ಷಕ ಉ.ರಾ.ನಾಗೇಶ್, ಶಿಕ್ಷಕಿಯರು, ಪೋಷಕರು ಉಪಸ್ಥಿತರಿದ್ದರು.

ಶಿಕ್ಷಕಿ ಕೆ.ಎಂ.ಅಯ್ಯಚ್ಚು ಸ್ವಾಗತಿಸಿದರು. ಶಿಕ್ಷಕಿ ದಿವ್ಯ ನಿರ್ವಹಿಸಿದರು. ಹಿರಿಯ ಶಿಕ್ಷಕಿ ರಾಬಿಯಾ ಪ್ರಮಾಣ ವಚನ ಬೋಧಿಸಿದರು.

ಶೈಕ್ಷಣಿಕ ಸವಲತ್ತು ಬಳಸಿಕೊಳ್ಳಿ- ಕಡ್ಡಿ ಸುಂದರ
ನಾಪೋಕ್ಲು:ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವು ಸವಲತ್ತುಗಳು ದೊರಕುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಮುಂದುವರಿಯಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕಡ್ಡಿಸುಂದರ ಹೇಳಿದರು.

ಸಮೀಪದ ಮೂರ್ನಾಡಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಶಾಲೆಗಾಗಿ ನಾವು-ನೀವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಅಗತ್ಯ ಮೂಲ ಸೌಕರ್ಯ ಲಭ್ಯವಾಗಬೇಕು. ಮಕ್ಕಳು ಕಡ್ಡಾಯವಾಗಿ ಶಾಲೆಗೆ ದಾಖಲಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹಮ್ಮಿಕೊಂಡಿರುವ ಶಾಲೆಗಾಗಿ ನಾವು-ನೀವು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಇದಕ್ಕೂ ಮುನ್ನ ವಿದ್ಯಾರ್ಥಿಗಳು ಮೂರ್ನಾಡು ಪಟ್ಟಣದ ಮುಖ್ಯ ಬೀದಿಗಳಲ್ಲಿ ಬ್ಯಾಂಡ್ ಸೆಟ್ಗಳೊಂದಿಗೆ ಘೋಷಣೆ ಕೂಗುತ್ತ ಜಾಥಾ ನಡೆಸಿದರು.

ಎಸ್ಡಿಎಂಸಿ ಅಧ್ಯಕ್ಷ ಕೆ.ವಿ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಮಾದಪ್ಪ, ಗೀತಾ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಟಿ.ಕೆ. ಪುಪ್ಪಲತಾ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಎಸ್.ಎಸ್. ಅಂತರಗೊಂಡ ವಂದಿಸಿದರು.

ಪ್ರೌಢಶಾಲೆ: ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಶಾಲೆಗಾಗಿ ನಾವು ನೀವು ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಕಡ್ಡಿಸುಂದರ ಉದ್ಘಾಟಿಸಿದರು. ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶೇಖ್ ಅಹಮದ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಮಿತಿ ಸದಸ್ಯ ಚಂದ್ರ, ಶಾಲಾ ಶೈಕ್ಷಣಿಕ ಸಮಿತಿ ಸದಸ್ಯೆ ಪ್ರೇಮಲತಾ ಗೋಪಾಲಕೃಷ್ಣ, ಮುಖ್ಯಶಿಕ್ಷಕ ಬಿ.ಜಿ. ಶಿವರಾಜ್ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಶಾಲೆಗಾಗಿ ನಾವು-ನೀವು ಕಾರ್ಯಕ್ರಮಕ್ಕೆ ಚಾಲನೆ
ಸೋಮವಾರಪೇಟೆ: ಇಲ್ಲಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿಹಮ್ಮಿಕೊಂಡಿದ್ದ ಶಾಲೆಗಾಗಿ ನಾವು-ನೀವು ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಶಿವಪ್ಪ ಗುರುವಾರ ಉದ್ಘಾಟಿಸಿದರು.
ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ಅರ್ಥಪೂರ್ಣ ಹಾಗೂ ಯಶಸ್ವಿ ಅನುಷ್ಠಾನವಾಗಬೇಕು ಎಂದು ಆಶಿಸಿದರು.

ಎಸ್ಡಿಎಂಸಿ ಅಧ್ಯಕ್ಷೆ ಲೀಲಾ, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲ, ಮುಖ್ಯೋಪಾಧ್ಯಾಯ ದೇವರಾಜಯ್ಯ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ತಲ್ತಾರೆ ಶೆಟ್ಟಳ್ಳಿ: ತಲ್ತಾರೆ ಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲೆಗಾಗಿ ನಾವು-ನೀವು ಕಾರ್ಯಕ್ರಮದ ತಾ.ಪಂ.ಸದಸ್ಯೆ ಪವಿತ್ರ ದೇವೇಂದ್ರ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಸಿ.ಸಿ.ಸೋಮಯ್ಯ ವಹಿಸಿದ್ದರು. ಗ್ರಾ.ಪಂ.ಸದಸ್ಯೆ ಜಾನಕಿ, ಮುಖ್ಯ ಶಿಕ್ಷಕ ಕೆ.ಡಿ.ಅಪ್ಪಯ್ಯ ಉಪಸ್ಥಿತರಿದ್ದರು.

ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿ.ಪಂ.ಸದಸ್ಯೆ ಎನ್.ಎಸ್.ಗೀತಾ ಕಾರ್ಯಕ್ರಮ ಉದ್ಘಾಟಿಸಿದರು.

`ಪೋಷಕರ ಜವಾಬ್ದಾರಿ ಮಹತ್ವದ್ದು~
ನಾಪೋಕ್ಲು: ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರೊಂದಿಗೆ ಪೋಷಕರಿಗೂ ಇದೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ನಿವೃತ್ತ ಶಿಕ್ಷಕ ಕುಲ್ಲೇಟಿರ ಮುತ್ತಪ್ಪ ಹೇಳಿದರು.

ಇಲ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಾಲೆಗಾಗಿ ನಾವು-ನೀವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಅಗತ್ಯ ಮೂಲಸೌಕರ್ಯ ಲಭ್ಯವಾಗಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕೆ.ಎಂ. ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಜಾನಿರಾಣಿ ಸ್ವಾಗತಿಸಿದರು. ಶಿಕ್ಷಕಿ ಗಾಯತ್ರಿ ವಂದಿಸಿದರು.

`ಪೋಷಕರ ಸಹಭಾಗಿತ್ವ ಅಗತ್ಯ~
ಶನಿವಾರಸಂತೆ: ಶಾಲೆಗಾಗಿ ನಾವು-ನೀವು ಎಂಬ ಕಾರ್ಯಕ್ರಮ ಯಶಸ್ವಿಗೊಳ್ಳಲು ಜನಪ್ರತಿನಿಧಿಗಳೊಂದಿಗೆ ಪೋಷಕರ ಸಹಭಾಗಿತ್ವವೂ ಅಗತ್ಯ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಎನ್.ರಘು ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಾಲೆಗಾಗಿ ನಾವು-ನೀವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ತಾಲ್ಲೂಕು ಪಂಚಾಯಿತಿ ಸದಸ್ಯೆ ಸವಿತಾ ಸತೀಶ್ ಮಾತನಾಡಿ, ಪೋಷಕರು ಸಂಪೂರ್ಣ ಸಹಕಾರ ನೀಡಿದಲ್ಲಿ ಮಕ್ಕಳ ಕಲಿಕಾ ಗುಣಮಟ್ಟ ಸುಧಾರಿಸುತ್ತದೆ ಎಂದರು.

ಎಸ್ಡಿಎಂಸಿ ಅಧ್ಯಕ್ಷ ಎಸ್.ಜೆ.ಹರೀಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲೂ ಉತ್ತಮವಾಗಿ ಕಲಿಯುವ ಮಕ್ಕಳಿದ್ದಾರೆ. ಕಲಿಕೆಯ ವಿಷಯದಲ್ಲಿ ಮಕ್ಕಳಿಗೆ ಒತ್ತಡ ಹಾಕಬಾರದು. ಪ್ರೀತಿಯಿಂದ ಕಲಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿ ಡಿ.ಎಲ್.ಮೂರ್ತಿ, ಮುಖ್ಯಶಿಕ್ಷಕ ಎಂ.ಆರ್.ಮಲ್ಲೇಶ್, ಶಿಕ್ಷಣ ಸಂಯೋಜಕ ವಸಂತ್ ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಮಹ್ಮದ್ಗೌಸ್, ಎಸ್ಡಿಎಂಸಿ ಉಪಾಧ್ಯಕ್ಷೆ ಸಾರಮ್ಮ ಸದಸ್ಯರು ಇದ್ದರು. ಶಿಕ್ಷಕಿಯರಾದ ಲಕ್ಷ್ಮಿ ಸ್ವಾಗತಿಸಿದರು. ಎಸ್.ವಿ.ಮಮತಾ ನಿರೂಪಿಸಿದರು. ಎಂ.ಡಿ.ಮಮತ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.