ಶನಿವಾರ, ಮೇ 28, 2022
25 °C

ಮರಳು ಸಾಗಣೆಗೆ ನಕಲಿ ಪರ್ಮಿಟ್: ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ತಾಲ್ಲೂಕಿನಲ್ಲಿ ನಕಲಿ ರಹದಾರಿ (ಪರ್ಮಿಟ್) ಸೃಷ್ಟಿಸಿಕೊಂಡು ಅಕ್ರಮ ಮರಳು ಸಾಗಣೆ ಮಾಡಿರುವ ಬಗ್ಗೆ ಲೋಕೋಪಯೋಗಿ ಇಲಾಖೆಗೆ ದಾಖಲೆ ದೊರೆತಿದ್ದು, ಸೂಕ್ತ ತನಿಖೆ ನಡೆಸುವಂತೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್.ಲಿಂಗರಾಜು ಪೊಲೀಸರಿಗೆ ದೂರು ನೀಡಿದ್ದಾರೆ.ತಹಶೀಲ್ದಾರ್ ಭಾಸ್ಕರ್ ನೇತೃತ್ವದಲ್ಲಿ ಪೊಲೀಸ್, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶನಿವಾರ ನಗರದಲ್ಲಿ ಮರಳು ಸಂಗ್ರಹ ಮಾಡಿದ ಕೆಲ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.`ತಾಲ್ಲೂಕಿನ ಕೊಡ್ಲಿಪೇಟೆಯ ಹೇಮಾವತಿ ಹಿನ್ನೀರು ಪ್ರದೇಶದ ಹಂಪಾಪುರದಲ್ಲಿ ನಡೆಯುತ್ತಿರುವ ಮರಳು ಗಣಿಗಾರಿಕೆ ಪ್ರದೇಶದಲ್ಲಿ ನಕಲಿ ರಹದಾರಿ ಮೂಲಕ ಮರಳು ಸಾಗಣೆ ಮಾಡಿ, ಸರ್ಕಾರಕ್ಕೆ ನಷ್ಟ ಮಾಡಿರುವ ಬಗ್ಗೆಯೂ ತನಿಖೆ ನಡೆಯಲಿದೆ~ ಎಂದು ಎಇಇ ತಿಳಿಸಿದ್ದಾರೆ.   ಪರಿಶೀಲನೆ ಸಂದರ್ಭದಲ್ಲಿ ಇತ್ತೀಚೆಗೆ ವರ್ಗಾವಣೆಗೊಂಡ ಎಇಇ ಅವರ ಸಹಿಯನ್ನು ನಕಲು ಮಾಡಿರುವುದು ಬೆಳಕಿಗೆ ಬಂದಿದೆ. ಇಲಾಖೆಯ ನಕಲಿ ಸೀಲ್‌ನೊಂದಿಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಕೃಷ್ಣ ಹಾಗೂ ಅಧೀಕ್ಷಕ ವೀರರಾಜ್ ಅವರ ನಕಲಿ ಸಹಿ ಮಾಡಿರುವ ಬಗ್ಗೆ ದಾಖಲೆಗಳು ಸಿಕ್ಕಿವೆ.ಲೋಕೋಪಯೋಗಿ ಇಲಾಖೆಗೆ ಬಂದಿರುವ ಪರವಾನಗಿ ನಕಲಿಯಾಗಿರುವ ಬಗ್ಗೆ ಅನುಮಾನ ಬಂದಿರುವ ಹಿನ್ನೆಲೆಯಲ್ಲಿ ಮೂಲ ರಹದಾರಿಯೊಂದಿಗೆ ತಾಳೆ ನೋಡುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.