ಸೋಮವಾರ, ಜನವರಿ 27, 2020
21 °C

ಮರುಪರೀಕ್ಷೆಗೆ ಕೋರಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2011ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮೂಲಕ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆಯನ್ನು ಪುನಃ ನಡೆಸಬೇಕು ಎಂದು ಕೋರಿ ಕರ್ನಾಟಕ ಆಡಳಿತ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಲಾಗಿದೆ.ರೇಣುಕಾಂಬಿಕೆ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕೆಎಟಿ, ಸರ್ಕಾರ ಮತ್ತು ಆಯೋಗಕ್ಕೆ ನೋಟಿಸ್‌ ಜಾರಿಗೆ ಸೋಮವಾರ ಆದೇಶಿಸಿದೆ. ಉತ್ತರ ಪತ್ರಿಕೆಗಳ ಮರುಮೌಲ್ಯ­ಮಾಪನ, ಮರುಸಂದರ್ಶನವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಬೇಕು ಎಂದೂ ಅರ್ಜಿಯಲ್ಲಿ ಕೋರಲಾಗಿದೆ. ವಿಚಾರಣೆ ಮುಂದೂಡಲಾಗಿದೆ.

ಪ್ರತಿಕ್ರಿಯಿಸಿ (+)