ಬುಧವಾರ, ಜೂನ್ 16, 2021
27 °C

ಮರ ಗಿಡಗಳನ್ನು ಮಕ್ಕಳಂತೆ ಪೋಷಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ: `ಉದ್ಯಾನವನಗಳು ಹಾಗೂ ಮರ ಗಿಡಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೆಳೆಸುವುದರ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು~ ಎಂದು  ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಕರೆ ನೀಡಿದರು.ಉತ್ತರಹಳ್ಳಿ ಸಮೀಪದ ರಾಮಾಂಜನೇಯ ನಗರದಲ್ಲಿ ಬಿಬಿಎಂಪಿ ವತಿಯಿಂದ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಉದ್ಯಾನವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.`ಉತ್ತಮ ಪರಿಸರದ ದೃಷ್ಠಿಯಿಂದ ಅವಶ್ಯಕತೆ ಇರುವ ಕಡೆ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಆದ್ಯತೆ ನೀಡಲಾಗುವುದು. ಜೊತೆಗೆ ಉತ್ತರಹಳ್ಳಿಯ ವಿವಿಧ ಕಡೆಗಳಲ್ಲಿ ಯೋಗಕೇಂದ್ರ ಮತ್ತು ಗ್ರಂಥಾಲಯಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು~ ಎಂದು ತಿಳಿಸಿದರು.ಮಂಜುನಾಥನಗರದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಬಿಬಿಎಂಪಿ ಸದಸ್ಯೆ ವಿಜಯಾ ರಮೇಶ್, ಎಂಜಿನಿಯರ್‌ಗಳಾದ ಶ್ರೀಕಂಠೇಗೌಡ, ಎಸ್.ವೆಂಕಟೇಶ್, ಉದಯಕುಮಾರ್, ರಾಮಾಂಜನೇಯನಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಕೃಷ್ಣ ಅಯ್ಯರ್, ಟಿ.ಎ.ನಾಗನರಸಿಂಹ, ಬಲರಾಮ್ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.