ಮಲೆನಾಡು ಅಭಿವೃದ್ಧಿ ಮಂಡಳಿಗೆ ರೂ 34 ಕೋಟಿ

7

ಮಲೆನಾಡು ಅಭಿವೃದ್ಧಿ ಮಂಡಳಿಗೆ ರೂ 34 ಕೋಟಿ

Published:
Updated:

ಬೆಂಗಳೂರು: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರ್ಷ 34.30 ಕೋಟಿ ಅನುದಾನ ಹಂಚಿಕೆಯಾಗಿದೆ ಎಂದು ಯೋಜನಾ ಸಚಿವ ಎಸ್.ಆರ್.ಪಾಟೀಲ ಹೇಳಿದರು.ಬುಧವಾರ ವಿಧಾನಸೌಧದಲ್ಲಿ ನಡೆದ ಮಂಡಳಿಯ ಸರ್ವ ಸದಸ್ಯರ ಸಭೆಯಲ್ಲಿ 2013-14ನೇ ಸಾಲಿನ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಲಾಗಿದ್ದು, ಹಿಂದೆ ಬಳಕೆಯಾಗದೆ ಇರುವ 12.83 ಕೋಟಿ ಅನುದಾನವನ್ನು ಈ ವರ್ಷ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.ಡಾ.ಡಿ.ಎಂ.ನಂಜುಂಡಪ್ಪ ವರದಿ ಪ್ರಕಾರ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕವಾದ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಗಳಿಗೆ ಒತ್ತು ನೀಡಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry