ಭಾನುವಾರ, ಮೇ 9, 2021
26 °C

ಮಲೆನಾಡ ಉತ್ಸವಕ್ಕೆ ತೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾವರ: ಮಲೆನಾಡ ಸೆರಗಿನ 9 ಜಿಲ್ಲೆಗಳ ವಿವಿಧ ಕಲಾವಿದರ ಮೇಳೈಸುವಕೆಯಲ್ಲಿ 7 ದಿನಗಳ ಕಾಲ ತಾಲ್ಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಮಲೆನಾಡ ಉತ್ಸವದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು.ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಮಲೆನಾಡ ಉತ್ಸವ ನಡೆಸುವ ಜೊತೆಗೆ ಸಂಸ್ಕೃತಿ ಹಾಗೂ ಸಂಸ್ಕಾರ ರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಂಗಾರಮಕ್ಕಿ ಕ್ಷೇತ್ರ ಕರ್ನಾಟಕದ ಸಾಂಸ್ಕೃತಿಕ ರಾಯಭಾರ ಕಚೇರಿಯಾಗಲೆಂದು ಆಶಿಸಿದರು.ಹರಿದ್ವಾರದ ಪತಂಜಲಿ ಯೋಗಪೀಠದ ಆಚಾರ್ಯ ಬಾಲಕೃಷ್ಣ ಅವರಿಗೆ ಒಂದು ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡ ಶ್ರೀ ವೀರಾಂಜನೇಯ ಸುಜ್ಞಾನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಬಾಲಕೃಷ್ಣ ಆಚಾರ್ಯ, ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಸಾಧು-ಸಂತರು ಕೈಜೋಡಿಸಬೇಕೆಂದು ಹೇಳಿದರು.ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿಯೇ ಯೋಗವನ್ನು ಪಠ್ಯದಲ್ಲಿ ಅಳವಡಿಸಬೇಕೆಂದು ಸಲಹೆ ನೀಡಿದರು. ಮನುಷ್ಯನ ಉನ್ನತಿ ಹಾಗೂ ಪರಿಸರದ ರಕ್ಷಣೆಗೆ ಬದ್ಧವಾಗಿರುವುದಾಗಿ ಹೇಳಿದ ಕ್ಷೇತ್ರದ ಧರ್ಮಾಧಿಕಾರಿ ಮಾರುತಿ ಗುರೂಜಿ, ಯೋಗ ವ್ಯಕ್ತಿ ಹಾಗೂ ಸಮಾಜದ ಆರೋಗ್ಯ ಕಾಪಾಡಬಲ್ಲುದು ಎಂದು ಅಭಿಪ್ರಾಯಪಟ್ಟರು.ಮಲೆನಾಡ ಉತ್ಸವದ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನು ಮಾರುತಿ ಗುರೂಜಿ ಅಭಿನಂದಿಸಿದರು.

ಶ್ರೀ ಕ್ಷೇತ್ರ ಕರ್ಕಿ ಮಠದ ಪ್ರಜ್ಞಾನಂದ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ, ನೌಕರರ ಸಂಘದ ಅಧ್ಯಕ್ಷ ಎಲ್.ಬೈರಪ್ಪ, ಕೆ.ಎಸ್.ಡಿ.ಎಲ್. ಅಧ್ಯಕ್ಷ ಶಿವಾನಂದ ನಾಯ್ಕ, ಕಾಂಗ್ರೆಸ್ ಮುಖಂಡ ಸತೀಶ ಸೈಲ್, ಡಾ. ಸಿ.ಸೋಮಶೇಖರ, ನಟ ನಾಗಶೇಖರ ಮಾತನಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.