ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಭಾನುವಾರ ರಾತ್ರಿಯಿಂದ ತನ್ನ ಆರ್ಭಟ ಹೆಚ್ಚಿಸಿದೆ.

ಮಳೆಯ ಪ್ರಮಾಣ ಹೆಚ್ಚಾದಂತೆ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಮನೆ ಕುಸಿತ, ಬರೆ ಕುಸಿತ, ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿ, ವಿದ್ಯುತ್ ವ್ಯತ್ಯಯ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ನೋಣು- ಕೊರಪಲು ದಂಪತಿಗಳು ವಾಸವಿದ್ದ ಮನೆ ಕುಸಿದು ಬಿದ್ದಿದೆ. ಸೋಮವಾರಪೇಟೆ ಪಟ್ಟಣದ ರಾಂ ರಾವ್ ಅವರ ಮನೆಯ ಗೋಡೆಯು ಕುಸಿದು ಬಿದ್ದಿದೆ.

ನಾಪೋಕ್ಲು ಹೋಬಳಿಯ ಕುಂಜಿಲ ಗ್ರಾಮದ ಯು.ಸಿ. ಚಂಗಪ್ಪ ಎಂಬುವವರ ಮನೆ ಕುಸಿದು ಬಿದ್ದಿದ್ದು, ಸಾವಿರಾರು ರೂಪಾಯಿ ನಷ್ಟ ಉಂಟಾಗಿದೆ. ಮಜಹಳ್ಳಿಯ ಕೆ.ಪಿ. ಕಾರ್ಯಪ್ಪ ಅವರಿಗೆ ಸೇರಿದ ಹಸುವಿನ ಮೇಲೆ ಮರ ಬಿದ್ದ ಪರಿಣಾಮ ಹಸು ಅಸುನೀಗಿರುವ ಬಗ್ಗೆ ವರದಿಯಾಗಿದೆ.
ಜಿಲ್ಲೆಯ ಮಳೆಯ ವಿವರ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಂಡಂತೆ 24 ಗಂಟೆಯ ಅವಧಿಯಲ್ಲಿ 27.39 ಮಿ.ಮೀ. ಮಳೆ ಸುರಿದಿದೆ. ಕಳೆದ ವರ್ಷ ಇದೇ ದಿನ 1.31 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 725.22 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 439.55ಮಿ.ಮೀ ಮಳೆ ದಾಖಲಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ 46.55 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 1058.64 ಮಿ.ಮೀ. ಮಳೆ ದಾಖಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 583.97 ಮಿ.ಮೀ. ಮಳೆಯಾಗಿತ್ತು.

ವೀರಾಜಪೇಟೆ ತಾಲ್ಲೂಕಿನಲ್ಲಿ 14.8ಮಿ.ಮೀ. ಮಳೆ ಬಿದ್ದಿದೆ. ಜನವರಿಯಿಂದ ಇಲ್ಲಿಯವರೆಗೆ 537.12 ಮಿ.ಮೀ. ಮಳೆ ದಾಖಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 371.96 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ 20.83 ಮಿ.ಮೀ. ಮಳೆ ಸುರಿದಿದೆ. ಜನವರಿಯಿಂದ ಇಲ್ಲಿಯವರೆಗೆ 579.93 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 362.73 ಮಿ.ಮೀ ಮಳೆಯಾಗಿತ್ತು.

ಹೋಬಳಿವಾರು ಮಳೆ ವಿವರ: ಮಡಿಕೇರಿ ಕಸಬಾ 44.4 ಮಿ.ಮೀ., ನಾಪೋಕ್ಲು 28.6 ಮಿ.ಮೀ., ಸಂಪಾಜೆ 49.6 ಮಿ.ಮೀ., ಭಾಗಮಂಡಲ 63.6 ಮಿ.ಮೀ., ವೀರಾಜಪೇಟೆ ಕಸಬಾ 23 ಮಿ.ಮೀ., ಹುದಿಕೇರಿ 6.2 ಮಿ.ಮೀ., ಶ್ರಿಮಂಗಲ 27.2 ಮಿ.ಮೀ., ಪೊನ್ನಂಪೇಟೆ 8.4 ಮಿ.ಮೀ., ಅಮ್ಮತ್ತಿ 17 ಮಿ.ಮೀ., ಬಾಳಲೆ 7 ಮಿ.ಮೀ., ಸೋಮವಾರಪೇಟೆ ಕಸಬಾ 25 ಮಿ.ಮೀ., ಶನಿವಾರಸಂತೆ 16.2 ಮಿ.ಮೀ., ಶಾಂತಳ್ಳಿ 56.4 ಮಿ.ಮೀ., ಕೊಡ್ಲಿಪೇಟೆ 8.4 ಮಿ.ಮೀ., ಕುಶಾಲನಗರ 3 ಮಿ.ಮೀ., ಸುಂಟಿಕೊಪ್ಪ 16 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ: ಕೊಡಗಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಸೋಮವಾರ ಒಂದೆ ದಿನದಲ್ಲಿ ಹಾರಂಗಿ ಜಲಾಶಯಕ್ಕೆ ಒಂದೂವರೆ ಅಡಿಗೂ ಅಧಿಕ (1.82) ನೀರು ಹರಿದು ಬಂದಿದೆ. ಜಲಾಶಯದಲ್ಲಿ ಪ್ರಸ್ತುತ 2831.45 ಅಡಿ ನೀರು ಸಂಗ್ರಹವಾಗಿದೆ (ಗರಿಷ್ಠ ಮಟ್ಟ 2,859 ಅಡಿಗಳು). ಹಾರಂಗಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ 6.6 ಮಿ.ಮೀ. ಮಳೆ ಸುರಿದಿದೆ. ಇಂದಿನ ನೀರಿನ ಒಳ ಹರಿವು 1,091 ಕ್ಯೂಸೆಕ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.