ಬೆಂಗಳೂರು: ನಗರದ ಹಲವೆಡೆ ಶನಿವಾರ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನ ತೀವ್ರ ತೊಂದರೆ ಅನುಭವಿಸಿದರು.

ನಗರದಲ್ಲಿ ಗರಿಷ್ಠ 19 ಮಿ.ಮೀ. ಮಳೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ 1.0 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ನಗರದ ವಿವಿಧ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಬ್ಬನ್ ಉದ್ಯಾನ ರಸ್ತೆ, ಬಸವೇಶ್ವರ ವೃತ್ತ, ಟ್ರಿನಿಟಿ ವೃತ್ತ, ಫ್ರೇಜರ್ ಟೌನ್ ಸೇರಿದಂತೆ ಹಲವೆಡೆ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಕೆಲ ಕಾಲ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.

ಜೀವನಹಳ್ಳಿಯ ಮೇಲು ಸೇತುವೆಯ ಕೆಳಭಾಗದಲ್ಲಿ ನೀರು ನಿಂತ ಪರಿಣಾಮ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ಆನಂತರ ಪಾಲಿಕೆ ಮತ್ತು ಜಲಮಂಡಳಿಯ ಎಂಜಿನಿಯರ್ಗಳು ಕಾರ್ಯಾಚರಣೆ ನಡೆಸಿ ಸಂಚಾರ ಸುಗಮಗೊಳಿಸಿದರು.

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಜನ ತೀವ್ರ ತೊಂದರೆ ಅನುಭವಿಸುವಂತಾಯಿತು. ಉಳಿದಂತೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.