ಮಸೂದೆಗಳಿಗೆ ಅಂಗೀಕಾರ ಬೇಡ: ಇಂದು ರಾಜ್ಯಪಾಲರಿಗೆ ಮನವಿ

7

ಮಸೂದೆಗಳಿಗೆ ಅಂಗೀಕಾರ ಬೇಡ: ಇಂದು ರಾಜ್ಯಪಾಲರಿಗೆ ಮನವಿ

Published:
Updated:

ಬೆಂಗಳೂರು: ಗೋಹತ್ಯೆ ನಿಷೇಧ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಆರಂಭಕ್ಕೆ ಅನುವು ಮಾಡುವ ಮಸೂದೆಗಳೂ ಸೇರಿದಂತೆ ಬೆಳಗಾವಿಯಲ್ಲಿ ಜರುಗಿದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕಾರ ಪಡೆದಿರುವ ಮಹತ್ವದ ಮಸೂದೆಗಳಿಗೆ ರಾಜ್ಯಪಾಲರು ಅನುಮೋದನೆ ನೀಡಬಾರದು ಎಂದು ಪ್ರಜಾಪ್ರಗತಿ ರಂಗದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಸೂದೆಗಳಿಗೆ ಒಪ್ಪಿಗೆ ಸೂಚಿಸದೇ ಹಿಂದಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಲು ಇದೇ ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಲಾಗುವುದು ಎಂದರು.ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಈ ವಿಷಯದಲ್ಲಿ ಬೇಜವಾಬ್ದಾರಿಯಿಂದ ವರ್ತಿಸಿವೆ. ಚರ್ಚೆಯಲ್ಲಿ ಭಾಗವಹಿಸದೇ ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳಿಗೆ ಈಗ ಮಸೂದೆ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ. ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲಿ ಮಸೂದೆಗಳನ್ನು ಅಂಗೀಕರಿಸಿದ ಆಡಳಿತ ಪಕ್ಷವೂ ಹೊಣೆಗಾರಿಕೆಯಿಂದ ನುಣುಚಿಕೊಂಡಿದೆ ಎಂದು ಅವರು ದೂರಿದರು.ರಾಜ್ಯಪಾಲರು ಈ ಮಸೂದೆಗಳಿಗೆ ಒಪ್ಪಿಗೆ ನೀಡಬಾರದು. ಬದಲಾಗಿ ಸರ್ಕಾರವನ್ನು ವಜಾಗೊಳಿಸಬೇಕು. ಜನಪರ ಆಡಳಿತ ನಡೆಸುವಲ್ಲಿ ವಿಫಲವಾಗಿರುವ ಸರ್ಕಾರ ನೈತಿಕ ಹೊಣೆ ಹೊತ್ತು ವಿಧಾನಸಭೆ ವಿಸರ್ಜಿಸಬೇಕು ಎಂದು ಅವರು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry