ಭಾನುವಾರ, ಜನವರಿ 19, 2020
26 °C

ಮಸೂದೆ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಕೇಂದ್ರ ಸರ್ಕಾರ ತರಲು ಹೊರಟಿರುವ ಉದ್ದೇಶಿತ `ಮತೀಯ ಹಾಗು ನಿರ್ದೇಶಿತ ಹಿಂಸಾಚಾರ ತಡೆ ಮಸೂದೆ~ಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ತಾಲ್ಲೂಕು ಹಿಂದೂ ಹಿತ ರಕ್ಷಣಾ ಸಮಿತಿ ಸದಸ್ಯರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ವಿವೇಕಾನಂದ ವಿದ್ಯಾ ಕೇಂದ್ರದಿಂದ ಹೊರಟು ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಾಲ್ಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮಸೂದೆ ವಿರುದ್ಧ ಧಿಕ್ಕಾರ ಕೂಗಿದರು.ವಕೀಲ ಪಿ.ಎಸ್.ಮಂಜುನಾಥ್ ಮಾತನಾಡಿ `ಅಲ್ಪಸಂಖ್ಯಾತರನ್ನು ಓಲೈಸಿ ಅವರ ಮತ ಪಡೆಯುವಲ್ಲಿ ಈ ಮಸೂದೆಯನ್ನು ರೂಪಿಸಲಾಗಿದೆ. ಮಸೂದೆ ಜಾರಿ ಆದಲ್ಲಿ ಹಿಂದುಗಳಿಗೆ ಯಾವುದೇ ಧಾರ್ಮಿಕ, ಸಾಮಾಜಿಕ ರಕ್ಷಣೆ ಸಿಗದೆ ಅವರನ್ನು ದಮನ ಮಾಡಲು ಹುನ್ನಾರ ನಡೆಸಲಾಗಿದೆ~ ಎಂದರು.ಸಮಿತಿಯ ಸಂಚಾಲಕ ವಿಜಯಕುಮಾರ್, ತಾಲ್ಲೂಕು ಕರವೇ ಅಧ್ಯಕ್ಷ ಸಿ.ಜಯರಾಜ್,ಮುಖಂಡರಾದ ಬಸವರಾಜ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಂತರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಕ್ರಿಯಿಸಿ (+)