ಭಾನುವಾರ, ನವೆಂಬರ್ 17, 2019
25 °C

ಮಸ್ಕಿ ಶಾಸಕ ಪ್ರತಾಪ ಗೌಡ ರಾಜೀನಾಮೆ

Published:
Updated:

ಬೆಂಗಳೂರು:  ಬಿಜೆಪಿಯ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ ಅವರು ಶನಿವಾರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಳಿಗ್ಗೆ ವಿಧಾನಸೌಧಕ್ಕೆ ರಾಜೀನಾಮೆ ನೀಡಲು ಬಂದ ಪಾಟೀಲರಿಗೆ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಸಿಗಲಿಲ್ಲ. ಅವರು ಮಡಿಕೇರಿಯಲ್ಲಿರುವ ಕಾರಣ ಅಲ್ಲಿಗೇ ತೆರಳಿ ರಾಜೀನಾಮೆ ನೀಡಿದ್ದಾರೆ.`ಬೋಪಯ್ಯ ಅವರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಹೀಗಾಗಿ ಖದ್ದು ಭೇಟಿ ಮಾಡಿ ರಾಜೀನಾಮೆ ಪತ್ರ ನೀಡಲು ಸಾಧ್ಯವಾಗಲಿಲ್ಲ. ಅವರ ಸಲಹೆಯಂತೆ ಮನೆಯಲ್ಲಿ ರಾಜೀನಾಮೆ ಪತ್ರ ಕೊಟ್ಟು ಬಂದಿದ್ದೇನೆ' ಎಂದು ಅವರು `ಪ್ರಜಾವಾಣಿ'ಗೆ ತಿಳಿಸಿದರು.ಮಸ್ಕಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿಯಲಿದ್ದಾರೆ. `ಕಾಂಗ್ರೆಸ್ ಟಿಕೆಟ್ ಸಿಗುವ ಭರವಸೆ ಸಿಕ್ಕಿದೆ' ಎಂದು ಪಾಟೀಲರು ವಿವರಿಸಿದರು.

ಪ್ರತಿಕ್ರಿಯಿಸಿ (+)