ನವದೆಹಲಿ (ಪಿಟಿಐ): ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ್ದ ಮಹತ್ವದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ತಿದ್ದುಪಡಿ ವಿಧೇಯಕಕ್ಕೆ ಸೋಮವಾರ ಲೋಕಸಭೆ ಅಂಗೀಕಾರ ನೀಡಿದೆ.

ಕಳೆದ ವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಜಿಎಸ್ಟಿ ತಿದ್ದುಪಡಿ ವಿಧೇಯಕನ್ನು ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಮಂಡಿಸಿದ್ದು, ಈ ವೇಳೆ ಸದನದಲ್ಲಿ ಹಾಜರಿದ್ದ ಎಲ್ಲಾ 427 ಸದಸ್ಯರೂ ವಿಧೇಯಕದ ಪರವಾಗಿ ಮತ ಚಲಾಯಿಸಿದ್ದಾರೆ. ಆದರೆ ಎಐಎಡಿಎಂಕೆ ಸದಸ್ಯರು ಸದನದಿಂದ ಹೊರ ನಡೆದು ಜಿಎಸ್ಟಿಗೆ ವಿರೋಧ ಸೂಚಿಸಿದ್ದಾರೆ .

ವಿಧೇಯಕ ಅಂಗೀಕಾರ ಪ್ರಕ್ರಿಯೆಗೆ ಮುನ್ನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್ಟಿ ಜಾರಿಯಿಂದಾಗಿ ತೆರಿಗೆ ಭಯೋತ್ಪಾದನೆಗೆ ತೆರೆ ಬೀಳಲಿದೆ ಮತ್ತು ಇನ್ನು ಮುಂದೆ ಗ್ರಾಹಕನೇ ದೊರೆ ಎಂದಿದ್ದಾರೆ. ಜಿಎಸ್ಟಿ ವಿಧೇಯಕ ಅಂಗೀಕಾರಕ್ಕೆ ಸಹಕರಿಸಿದ ಎಲ್ಲಾ ರಾಜಕೀಯ ಪಕ್ಷಗಳಿಗೆ ಧನ್ಯವಾದ ಹೇಳಿದ ಅವರು, ಇದೊಂದು ಮಹತ್ತರ ಹೆಜ್ಜೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.