ಶುಕ್ರವಾರ, ಮೇ 7, 2021
20 °C

ಮಹದೇವಪುರ ಬಳಿ ಕಾರು ಮಗುಚಿ ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಾಲ್ಕಾರು ಬಾರಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರ ಪೈಕಿ ಯುವಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಶನಿವಾರ ರಾತ್ರಿ 8 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಮಹದೇವಪುರದ ಬಳಿ ಸಂಭವಿಸಿದೆ.   ಮೃತರನ್ನು ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಸುರೇಶ್ (42), ರಘುರಾಮ್ (38) ಎಂದು ಗುರುತಿಸಲಾಗಿದೆ. ಕುಣಿಗಲ್ ತಾಲ್ಲೂಕಿನ ಗಿಡದಪಾಳ್ಯದ ಗಂಗಾಧರ್ (38) ತೀವ್ರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲದ ಹರ್ಷ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ಕಳುಹಿಸಲಾಗಿದೆ.ಗಂಗಾಧರ್ ಗುತ್ತಿಗೆದಾರರಾಗಿದ್ದು, ಕುಣಿಗಲ್‌ನಲ್ಲಿ ಖಾಸಗಿ ಆಸ್ಪತ್ರೆಯ ಕಟ್ಟಡ ನಿರ್ಮಿಸುತ್ತಿದ್ದಾರೆ. ಕಟ್ಟಡದ ಮೇಲ್ವಿಚಾರಣೆ ನೋಡಿಕೊಂಡು ಇಂಡಿಕಾ ಕಾರಿನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರಂತ ಸಂಭವಿಸಿತು.ನಾಯಿ ಅಡ್ಡ ಬಂದಾಗ ತಪ್ಪಿಸಲು ಹೋದಾಗ ಕಾರು ಎಕ್ಸ್‌ಪ್ರೆಸ್ ಹೈವೆಯ ತಡೆಗೋಡೆಗೆ ಡಿಕ್ಕಿ ಹೊಡೆಯಿತು. ಅಲ್ಲಿಂದ ಪರ್ಯಾಯ ರಸ್ತೆಗೆ ಪಲ್ಟಿ ಹೊಡೆದ ಕಾರು ರಸ್ತೆ ಪಕ್ಕದ ಜಮೀನಿಗೆ ಹೋಗಿ ಬಿತ್ತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.